ಸುಂಟಿಕೊಪ್ಪ NEWS DESK ಡಿ.25 : ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಗ್ರಾಮಸಭೆಗೆ ಪ್ರಮುಖ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾದ ಕಾರಣ ತೀವ್ರ ಅಸಮಾಧಾನಗೊಂಡ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಸಭೆಯಿಂದ ಹೊರ ನಡೆದರು. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನ್ನಾಥ ಅವರ ಅಧ್ಯಕ್ಷತೆಯಲ್ಲಿ ಕಾನ್ಬೈಲು ಸರಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದು ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ತಯಾರಿ ಮಾಡಿಕೊಂಡಿದ್ದರು.
ಪ್ರಮುಖ ಇಲಾಖೆಗಳಾದ ಕಂದಾಯ, ನೀರಾವರಿ, ಆಹಾರ, ಅರಣ್ಯ ಆದಿಕಾರಿಗಳು ಗೈರು ಹಾಜರಾಗಿದ್ದ ಕಾರಣ ಗ್ರಾಮಸ್ಥರು ಸಭೆ ಮುಂದೂಡಬೇಕೆAದು ಆಗ್ರಹಿಸಿದರು. ಅಧ್ಯಕ್ಷ ಮಂದೋಡಿ ಜಗನ್ನಾಥ ಮಾತನಾಡಿ ಇಂದಿನ ಸಭೆಯಲ್ಲಿ ಗ್ರಾಮಸ್ಥರು ನೀಡುವ ಅಹವಾಲನ್ನು ಆಯಾ ಇಲಾಖೆಯ ಅಧಿಕಾರಿಗಳಿಗೆ ಕಳುಹಿಸಿ ಅದನ್ನು ಅನುಷ್ಠಾನಗೊಳಿಸುವ ಪ್ರಯತ್ನ ಮಾಡೋಣ ಎಂದರು. ಈ ಸಂದರ್ಭ ಮಾತನಾಡಿದ ಗ್ರಾಮಸ್ಥರಾದ ರಾಮಯ್ಯ, ಅಂಬೆಕಲ್ ಚಂದ್ರು, ಶಾಂತಪ್ಪ ಮತ್ತಿತರರು ಪಡಿತರ, ಕುಡಿಯುವ ನೀರು, ರಸ್ತೆ ಮತ್ತು ಅರಣ್ಯ ಇಲಾಖೆಗೆ ಸಂಬoಧಿಸಿದ ಸಮಸ್ಯೆಗಳಿದ್ದು, ಅಧಿಕಾರಿಗಳು ಇಲ್ಲದೆ ಸಭೆ ನಡೆಸಿ ಪ್ರಯೋಜನವಿಲ್ಲ, ಸಭೆಯನ್ನು ಮುಂದೂಡಿ ಎಂದು ಒತ್ತಾಯಿಸಿದರು. ಗೈರು ಹಾಜರಾದ ಅಧಿಕಾರಿಗಳಿಗೆ ದಿಕ್ಕಾರ ಕೂಗಿ ಸಭೆಯಿಂದ ಹೊರ ನಡೆದರು. ಜಿ.ಪಂ ಸಹಾಯಕ ಅಭಿಯಂತರ ಫಯಾಜ್ ಅಹ್ಮದ್ ಮಾತನಾಡಿ ನಾಕೂರು ಶಿರಂಗಾಲ ಗ್ರಾ.ಪಂ ಗೆ ಸರಕಾರದಿಂದ ರಸ್ತೆ, ಕೆರೆ, ಅಂಗನವಾಡಿ ಕೇಂದ್ರದ ದುರಸ್ತಿ, ತಡೆಗೋಡೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 58.5ಲಕ್ಷ ರೂ. ಕ್ರಿಯಾಯೋಜನೆಗೆ ಅನುಮೋದನೆ ದೊರೆತ್ತಿದೆ. ಶಾಸಕರು ಸಧ್ಯದಲ್ಲೆ ಈ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದರು. ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ಇಂಜಿನಿಯರ್ ವಿಷ್ಣು, ನೋಡಲ್ ಅಧಿಕಾರಿ ಕಾನ್ಬೈಲು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯ್ತಿ ಉಪಾಧ್ಯಕ್ಷ ಸತೀಶ, ಸದಸ್ಯರುಗಳಾದ ಕೊಳಂಬೆ ಸುಭಾಷ್, ಪ್ರೇಮ, ಬಿ.ಜಿ.ರಮೇಶ್, ಸೀತೆ, ರಾಧಾಮಣಿ, ಅರುಣ ಕುಮಾರಿ, ಪಂಚಾಯಿತಿ ಅಭಿವೃಧ್ದಿ ಅಧಿಕಾರಿ ಗೂಳಪ್ಪ ಕೂತಿನ ಹಾಗೂ ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.