ಮಡಿಕೇರಿ ಡಿ.25 NEWS DESK : ಇತಿಹಾಸ ಪ್ರಸಿದ್ಧ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ನೂತನ ಪ್ರವೇಶ ದ್ವಾರವನ್ನುಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅನಾದಿಕಾಲದಿಂದಲೂ ಪ್ರಸಿದ್ಧವಾದ ಈ ದೇವಸ್ಥಾನಕ್ಕೆ ನೂತನ ಕಾಯಕಲ್ಪ ನೀಡಿರುವುದು ಅತ್ಯಂತ ಖುಷಿಯನ್ನು ನೀಡಿದೆ ಎಂದು ಬಣ್ಣಿಸಿದರು. ಶ್ರೀ ಪಾಡಿ ಇಗ್ಗುತ್ತಪ್ಪ ದೇವರ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲೆ ಇರಲಿ ಎಂದು ಹಾರೈಸಿದರು. ಈ ಸಂದರ್ಭ ವಿಧಾನ ಪರಿಷತ್ತು ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಪ್ರಮುಖರಾದ ತೀತಿರ ರೋಶನ್ ಅಪ್ಪಚ್ಚು ಹಾಗೂ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು, ಗ್ರಾಮಸ್ಥರು ಹಾಜರಿದ್ದರು.