ಮಡಿಕೇರಿ ಡಿ.25 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಲೋಕಸಭಾ ಆಯೋಗದ ವತಿಯಿಂದ ನಡೆಸಲಾಗುತ್ತಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆಗಳು ಡಿ.29 ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಎಫ್.ಎಂ.ಕೆ.ಎಂ.ಸಿ ಕಾಲೇಜು ಇಲ್ಲಿ ಪರೀಕ್ಷೆ ನಡೆಯಲಿದೆ. ಆ ದಿಸೆಯಲ್ಲಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಇಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರು ಅನಂತ್ ಪ್ರಕಾಶ್ ಮೀನಾರವರು ಆದೇಶ ಹೊರಡಿಸಿದ್ದಾರೆ.