ಮಡಿಕೇರಿ ಡಿ.25 NEWS DESK : 2025-26 ನೇ ಸಾಲಿಗೆ ನಗರಸಭೆ ಆಯವ್ಯಯ ತಯಾರಿಸುವ ಸಲುವಾಗಿ ಈ ಸಾಲಿನ ಆದಾಯ ಮತ್ತು ವ್ಯಯದ ಬಗ್ಗೆ ಸೂಕ್ತ ಸಲಹೆ ಸೂಚನೆ ಪಡೆಯಲು ನಗರಸಭೆ ಪೌರಯುಕ್ತರ ಅಧ್ಯಕ್ಷತೆಯಲ್ಲಿ ಹಾಗೂ ಚುನಾಯಿತ ಆಡಳಿತ ಸದಸ್ಯರ ಉಪಸ್ಥಿತಿಯಲ್ಲಿ ಡಿ.30 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಸಭೆಗೆ ಹಿರಿಯ ನಾಗರಿಕರು, ನೋಂದಾಯಿತ ಸಂಘ ಸಂಸ್ಥೆಗಳು, ಎನ್‍ಜಿಒಗಳು ಮತ್ತು ಮಾಜಿ ಚುನಾಯಿತ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಹಾಗೂ ಆಸಕ್ತಿಯುಳ್ಳ ಸಾರ್ವಜನಿಕರು ಹಾಜರಾಗಿ ತಮ್ಮ ಸೂಕ್ತ ಸಲಹೆ ಮಾರ್ಗದರ್ಶನ ನೀಡುವಂತೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಕೋರಿದ್ದಾರೆ.