ಬೆಳಗಾವಿ ಡಿ.25 NEWS DESK : ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಕಮರಿಗೆ ಉರುಳಿಬಿದ್ದು ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಹುತಾತ್ಮರಾಗಿದ್ದು, ಒಬ್ಬರು ಗಾಯಗೊಂಡಿದ್ದರು. ಹುತಾತ್ಮ ಯೋಧರನ್ನು ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಎಂದು ಗುರುತಿಸಲಾಗಿದೆ.
ಸಂತಾಪ :: ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.