ಮಡಿಕೇರಿ ಡಿ.25 NEWS DESK : ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ, ಬಾಳೆಹೊನ್ನೂರು, 2025 ನೇ ಇಸವಿಯಲ್ಲಿ 100 ನೇ ವರ್ಷದ ಶತಮಾನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಿದ್ದು, ಇದರ ಪ್ರಯುಕ್ತ ಕಾಫಿ ಬೆಳೆಯುವ ಪ್ರದೇಶಗಳಿಂದ 100 ಪ್ರಗತಿಪರ ಕಾಫಿ ಬೆಳೆಗಾರರನ್ನ ಗುರುತಿಸಿ ಸನ್ಮಾನಿಸಲು ನಿರ್ಧರಿಸಲಾಗಿದೆ. ಆದ್ದರಿಂದ, ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಕಾಫಿ ಬೆಳೆಗಾರರು ಹತ್ತಿರದ ಕಾಫಿ ಮಂಡಳಿಯ ಕಚೇರಿಯಿಂದ ಅರ್ಜಿಯನ್ನು ಪಡೆದು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 10/01/2025 ರ ಒಳಗೆ ಸಲ್ಲಿಸಲು ಕೋರಿಕೊಳ್ಳಲಾಗಿದೆ.