Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»Uncategorized»ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ
Uncategorized

ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ

ಡಿಸೆಂಬರ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಡಿ.25 : ಚಿರತೆಯನ್ನು ಹೋಲುವ ಕಾಡುಬೆಕ್ಕು ಏಕಾಏಕಿ ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ನಿಟ್ಟೂರು ಸಮೀಪದ ತಟ್ಟಕೆರೆ ಪೈಸಾರಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ರಾಜನ್ (48) ಎಂಬುವವರೇ ಕಾಡುಬೆಕ್ಕಿನ ದಾಳಿಗೊಳಗಾದವರಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ವನ್ಯಜೀವಿ ದಾಳಿ ಮಾಡಿ ಕಿವಿ ಮತ್ತು ತಲೆಯ ಭಾಗಕ್ಕೆ ಘಾಸಿಗೊಳಿಸಿತು. ಅದೃಷ್ಟವಶಾತ್ ಕಿರುಚಾಟ ಕೇಳಿ ಪ್ರಾಣಿ ಅಲ್ಲಿಂದ ಕಾಲ್ಕಿತ್ತಿದೆ. ನಂತರ ಗಾಯಾಳು ರಾಜನ್ ಅವರನ್ನು ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಲಾಯಿತು. ರಾಜನ್ ಅವರು ಗಾಬರಿಯಿಂದ ನನ್ನ ಮೇಲೆ ಹುಲಿ ದಾಳಿಯಾಗಿದೆ ಎಂದು ಹೇಳಿಕೆ ನೀಡಿದ ಪರಿಣಾಮ ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು. ಅಲ್ಲದೆ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ರಾಜನ್ ಅವರ ಆರೋಗ್ಯ ವಿಚಾರಿಸಿದರು. ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವನ್ಯಜೀವಿಯ ಸೆರೆಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಶಾಸಕರ ಸೂಚನೆ ಮೇರೆಗೆ ದಾಳಿಯಾದ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಪರಿಶೀಲನೆ ನಡೆಸಿದಾಗ ಕಾಡುಬೆಕ್ಕಿನ ಮರಿಗಳು ಪತ್ತೆಯಾಗಿವೆ. ಈ ಬಗ್ಗೆ ಗಾಯಾಳು ರಾಜನ್ ಅವರ ಬಳಿ ಖಾತ್ರಿ ಪಡಿಸಿಕೊಳ್ಳುವ ಪ್ರಯತ್ನವನ್ನು ಸಿಬ್ಬಂದಿಗಳು ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಮಾಹಿತಿ ನೀಡಿದ ರಾಜನ್ ಅವರು ವನ್ಯಜೀವಿ ದಾಳಿ ಸಂದರ್ಭ ಗಾಬರಿಯಿಂದ ಹುಲಿ ಎಂದು ಭಾವಿಸಿ ಹುಲಿ ದಾಳಿಯಾಗಿದೆ ಎಂದು ತಿಳಿಸಿರುವೆ, ನಿಖರವಾಗಿ ಯಾವ ಪ್ರಾಣಿ ಎಂದು ತಿಳಿದಿರಲಿಲ್ಲ, ದಾಳಿ ಮಾಡಿದ್ದು ಕಾಡು ಬೆಕ್ಕೇ ಆಗಿರಬಹುದೆಂದು ತಿಳಿಸಿದ್ದಾರೆ.
ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಗಾಯಾಳು ರಾಜನ್ ಅವರೊಂದಿಗೆ ಚರ್ಚಿಸಿದರು. ನಂತರ ಮಾತನಾಡಿದ ಪೊನ್ನಣ್ಣ ಹಾಗೂ ಸಂಕೇತ್ ಪೂವಯ್ಯ ಅವರು ತಟ್ಟಕೆರೆ ಪೈಸಾರಿಯಲ್ಲಿ ಕಾಡುಬೆಕ್ಕಿನಿಂದ ದಾಳಿಯಾಗಿದ್ದು, ಹುಲಿ ಎಂದು ತಪ್ಪು ಮಾಹಿತಿ ರವಾನೆಯಾಗಿದೆ. ಗ್ರಾಮಸ್ಥರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಇದು ಹುಲಿ ದಾಳಿಯಲ್ಲ, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ

ಸೆಪ್ಟೆಂಬರ್ 15, 2026

“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ

ಸೆಪ್ಟೆಂಬರ್ 5, 2026

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೆಪ್ಟೆಂಬರ್ 1, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK, ಅ. 15: ಕೊಡವಲ್ಯಾಂಡ್‌ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಗುರಿ ಸಾಧಿಸಲು 100 ದಿನಗಳು…

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026

ಎಸ್.ಐ.ಆರ್. ಪ್ರಕ್ರಿಯೆ ರದ್ದತಿಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 15, 2026

ಸುಂಟಿಕೊಪ್ಪ ಮಲಯಾಳಿ ಸಮಾಜದ 19ನೇ ವರ್ಷದ ಓಣಂ ಆಚರಣೆ; ಸಮಾಜದ ಒಗ್ಗಟ್ಟು ಮತ್ತು ಸಂಘಟನೆ ಎಲ್ಲರಿಗೂ ಮಾದರಿ: ಶಾಸಕ ಡಾ. ಮಂತರ್ ಗೌಡ

ಅಕ್ಟೋಬರ್ 15, 2026

ಸುಂಟಿಕೊಪ್ಪದಲ್ಲಿ ಮಲಯಾಳಿ ಸಮಾಜದಿಂದ 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 15, 2026

ಹೊಸತೋಟದಲ್ಲಿ ರಕ್ತದಾನ ಶಿಬಿರ: 30 ಮಂದಿ ರಕ್ತದಾನ

ಅಕ್ಟೋಬರ್ 15, 2026

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.