ಮಡಿಕೇರಿ ಡಿ.26 NEWS DESK : ಸುಮಾರು 25 ವರ್ಷಗಳಿಂದ ದುರಸ್ತಿ ಕಾಣದೆ ಸಾರ್ವಜನಿಕರಿಂದ ನಿರಂತರ ಟೀಕೆಗಳಿಗೆ ಒಳಗಾಗಿದ್ದ ರಸ್ತೆಗೆ ಕೊನೆಗೂ ದುರಸ್ತಿ ಭಾಗ್ಯ ದೊರೆತಿದೆ. ಮಡಿಕೇರಿ ನಗರಸಭೆಯ ವಾರ್ಡ್ ನಂ.19ರ ರೈಫಲ್ ರೆಂಜಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಓಡಾಡಲು ಪರದಾಡುವಂತಾಗಿತ್ತು. ಇದೀಗ ವಾರ್ಡ್ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮುತುವರ್ಜಿಯಿಂದ ರೂ.5 ಲಕ್ಷ ವೆಚ್ಚದಲ್ಲಿ ಸುಮಾರು 85 ಮೀಟರ್ ಉದ್ದ ಮತ್ತು 3 ಮೀಟರ್ ಅಗಲ ರಸ್ತೆಯನ್ನು ಕಾಂಕ್ರೀಟ್ ಮಾಡಲಾಗಿದ್ದು, ರಸ್ತೆ ದುರಸ್ತಿ ಕಾರ್ಯಕ್ಕೆ ಶ್ರಮಿಸಿದ ಸದಸ್ಯ ಕಾಳಚಂಡ ಅಪ್ಪಣ್ಣ ಮತ್ತು ವಾರ್ಡ್ ಪ್ರಮುಖರಾದ ಸುರೇಶ್ ಕುಲಾಲ್ ಅವರ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ವಾರ್ಡ್ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.