ಮಡಿಕೇರಿ ಡಿ.26 NEWS DESK : ಕಂಡಕರೆಯ ಗಾಂಧಿ ಯುವಕ ಸಂಘದಿಂದ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ರಾಷ್ಟ್ರ ಮಟ್ಟದ ಅಂಡರ್ 20 ಕಾಲ್ಚೆಂಡು ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಉಪಾಧ್ಯಕ್ಷ, ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಹಾಗೂ ಕೊಡಗು ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರಮಾಧ್ಯಮ ಸೇವೆಯನ್ನು ಗುರುತಿಸಿ ಗಾಂಧಿ ಯುವಕ ಸಂಘದಿಂದ “ಮಾದರಿ ಪತ್ರಕರ್ತ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಜಾತಿ,ಧರ್ಮ ಎಲ್ಲವನ್ನೂ ಮೀರಿ ಕ್ರೀಡೆ ಎಲ್ಲರನ್ನೂ ಒಂದುಗೂಡಿಸುತ್ತೆ ಎಂದರು. ಈ ಸಂದರ್ಭ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ, ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ,ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಇ ತೀರ್ಥಕುಮಾರ್,ಚೆಟ್ಟಳ್ಳಿ ಪ್ರೌಢಶಾಲಾ ಆಡಳಿತ ಮಂಡಳಿಯ ಸಂಚಾಲಕ ರತ್ತು ಚಂಗಪ್ಪ ಇದ್ದರು.