ಮಡಿಕೇರಿ ಡಿ.26 NEWS DESK : ಮೀನುಗಾರಿಕಾ ಇಲಾಖೆಯಿಂದ ಫಲಾನುಭವಿಗಳಿಗೆ ಮೀನು ಹಿಡಿಯುವ ಸಲಕರಣೆಗಳ ವಿತರಣೆಗಳನ್ನು ವಿತರಿಸಲಾಯಿತು. ಪೊನ್ನಂಪೇಟೆಯ ಶಾಸಕ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಫಲಾನುಭವಿಗಳಿಗೆ ಸಲಕರಣೆ ವಿತರಿಸಿ ಮಾತನಾಡಿ, ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಉತ್ತಮ ಪ್ರಗತಿ ಕಾಣುವಂತೆ ಹಾರೈಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರೀರ ನವೀನ್ ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.