ಮಡಿಕೇರಿ ಡಿ.26 NEWS DESK : ವಿರಾಜಪೇಟೆ ತಾಲ್ಲೂಕಿನ ತಾಲ್ಲೂಕು ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯು ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಸಾಮರ್ಥ್ಯ ಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಂದಾಯ, ಅರಣ್ಯ, ಸಮಾಜ ಕಲ್ಯಾಣ, ಕೃಷಿ, ITDP ಇಲಾಖೆಯ ಹಾಗೂರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ವರದಿ ಪರಿಶೀಲಿಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನಪರಿಷತ್ ಸದಸ್ಯ ಸುಜಾ ಕುಶಲಪ್ಪ, ಪೊನ್ನಂಪೇಟೆ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕಾಳೆಮಾಡ ಪ್ರಶಾಂತ್ ಹಾಗೂ ವಿರಾಜಪೇಟೆ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಪಿ.ವಿ.ಜಾನ್ಸನ್, ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಅಪ್ಪಣ್ಣ, ಮಿದೇರೀರ ನವೀನ್ ಹಾಗೂ ಎಲ್ಲಾ ಹಿರಿಯ ಅಧಿಕಾರಿಗಳು ಹಾಜರಿದ್ದರು.