ವಿರಾಜಪೇಟೆ ಡಿ.26 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಿರಾಜಪೇಟೆ ವತಿಯಿಂದ ಬಿಳುಗುಂದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದೇವಣಗೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಕ ಹೆಚ್.ಡಿ.ಲೋಕೇಶ್ ಮಾತನಾಡಿ, ಹದಿಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳ ದೈಹಿಕ ಮತ್ತು ಮನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಗುಟ್ಕಾ ಸೇವನೆ, ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಹಾನಿಕಾರಕ ಆದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ತಮ್ಮ ಅಮೂಲ್ಯವಾದ ಸಮಯವನ್ನು ವಿದ್ಯಾರ್ಜನೆಗೆ ಮೀಸಲಿಡಬೇಕು. ಇಂದಿನ ಮಕ್ಕಳು ಭವಿಷ್ಯದ ಪ್ರಜೆಗಳು, ಪರೀಕ್ಷಾ ಸಮಯ ಹತ್ತಿರವಾಗುತ್ತಿರುವುದರಿಂದ ಉತ್ತಮ ಅಂಕಗಳಿಸುವ ನಿಟ್ಟಿನಲ್ಲಿ ಅಂದಿನ ಪಾಠವನ್ನು ಅಂದೇ ಓದುವುದರ ಮೂಲಕ ಹೆಚ್ಚು ಅಂಕ ಗಳಿಸುವಂತಾಗಬೇಕು ಎಂದು ಸಲಹೆ ನೀಡಿದರು. ಶಾಲೆಯ ಮುಖ್ಯ ಶಿಕ್ಷಕಿ ಅರುಣ ಅನ್ಸಿ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಶಾಲೆಯ ಶಿಕ್ಷಕರಾದ ಲೀಲಾವತಿ ವಿ.ಕೆ, ಭವ್ಯ, ಮೇಲ್ವಿಚಾರಕ ಧನೇಶ್ ಕುಮಾರ್, ಸೇವಾ ಪ್ರತಿನಿಧಿ ರಂಜಿನಿ, ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.