ಮಡಿಕೇರಿ ಡಿ.26 NEWS DESK : ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಜ.1 ರಂದು ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಗರದ ಗಾಂಧಿಭವನದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲು ತೀರ್ಮಾನಿಸಲಾಯಿತು. ಸರ್ಕಾರಿ ಪ್ರೌಢಶಾಲೆಯಲ್ಲಿನ ಚಿತ್ರಕಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಪ್ರತ್ಯೇಕವಾಗಿ ಏರ್ಪಡಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. ಚಿತ್ರಕಲಾ ಸ್ಪರ್ಧೆಯನ್ನು ಪ್ರತ್ಯೇಕವಾಗಿ ಏರ್ಪಡಿಸಿ ಜ.1 ರಂದು ಚಿತ್ರಕಲಾ ಪ್ರದರ್ಶನಕ್ಕೆ ಅವಕಾಶ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಲಹೆ ನೀಡಿದರು. ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ದೇವದಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ಪಂಚಾಯತ್ ರಾಜ್ ಎಂಜಿನಿಯರ್ ನಾಯಕ್, ನಗರಸಭೆಯ ತಾಹೀರ್, ಮಣಜೂರು ಮಂಜುನಾಥ್ ಇತರರು ಇದ್ದರು.