ಮಡಿಕೇರಿ NEWS DESK ಡಿ.26 : ಮಡಿಕೇರಿ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಡಿ.28 ರಂದು ಶ್ರೀ ಅಯ್ಯಪ್ಪ ಸ್ವಾಮಿ ಉತ್ಸವ ನಡೆಯಲಿದೆ ಎಂದು ಶ್ರೀ ಅಯ್ಯಪ್ಪ ದೀಪಾರಾಧನಾ ಸಮಿತಿ ತಿಳಿಸಿದೆ. ಬೆಳಿಗ್ಗೆ 6 ಗಂಟೆಗೆ ನಡೆ ತೆಗೆಯುವುದು, 6.5 ಕ್ಕೆ ನಿರ್ಮಲ್ಯ ಪೂಜೆ, 6.30ಕ್ಕೆ ಗಣಪತಿ ಹೋಮ, 8ಕ್ಕೆ ಅಷ್ಟಾಭಿಷೇಕ ಸೇವೆ, 10.30ಕ್ಕೆ ಭಕ್ತರೊಡಗೂಡಿ ತುಳಸಿ ಸಹಸ್ರನಾಮಾರ್ಚನೆ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಮಂಗಳಾರತಿ, ಪ್ರಸಾದ ವಿತರಣೆಯಾಗಲಿದೆ. 1 ಗಂಟೆಗೆ ಪಾಲಕೊಂಬು ಪ್ರತಿಷ್ಠಾಪನೆ, 1.30ಕ್ಕೆ ತಾಯಂಬಕಂ (ಚಂಡೆಸೇವೆ), ಸಂಜೆ 4 ಕ್ಕೆ ಪಾಲಕೊಂಬು ಮೆರವಣಿಗೆ, ಅಶ್ವಿನಿ ಗಣಪತಿ ದೇವಸ್ಥಾನದಿಂದ ಶ್ರೀ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಚಂಡೆ ಮೇಳದೊಂದಿಗೆ ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ, 6.30 ಗಂಟೆಗೆ ದೀಪಾರಾಧನೆ, ಅಲಂಕಾರ ಪೂಜೆ, ರಾತ್ರಿ 7.30ಕ್ಕೆೆ ಪಡಿ ರಂಗಪೂಜೆ, ದುರ್ಗಾಪೂಜೆ, ಸುಬ್ರಹ್ಮಣ್ಯ ಪೂಜೆ, 8.30ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಮತ್ತು ಅನ್ನದಾನ ನಡೆಯಲಿದೆ. ನಂತರ 12 ಗಂಟೆಯಿಂದ 2 ಗಂಟೆಯವರೆಗೆ ಅಗ್ನಿಪೂಜೆ, 2 ಗಂಟೆಯಿಂದ ಬೆಳಿಗ್ಗೆ 5 ರ ವರೆಗೆ ಪೊಲಿಪಾಟ್, ಪಾಲ್ಕಿಂಡಿ ತಿರಿ ಉಳಿಚಲ್, ವೆಟ್ಟುಂತಡವು ಹಾಗೂ ಡಿ.29 ರಂದು ಬೆಳಿಗ್ಗೆ 5.30 ಗಂಟೆಗೆ ಅಗ್ನಿ ಕೊಂಡ ಹಾಯುವುದು ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಡಿ.28 ರಂದು ಸಂಜೆ 4ಗಂಟೆಗೆ ಶ್ರೀ ಮುತ್ತಪ್ಪ ದೇವಾಲಯದಿಂದ ಹೊರಡುವ ಉತ್ಸವ ಮೂರ್ತಿಯ ಮೆರವಣಿಗೆಯು ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸಿ ಮರಳಿ ದೇವಾಲಯಕ್ಕೆ ಬರಲಿದೆ. ಈ ಉತ್ಸವ ಮೂರ್ತಿಯ ಮೆರವಣಿಗೆಯಲ್ಲಿ ಭಕ್ತಾದಿಗಳು, ಮಹಿಳೆಯರು ಹಾಗೂ ಹೆಣ್ಣುಮಕ್ಕಳು ಕಳಸದೊಂದಿಗೆ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಮನವಿ ಮಾಡಿದೆ. ಅನ್ನದಾನಕ್ಕೆ ನೀಡುವ ಅಕ್ಕಿ, ತರಕಾರಿ ಇತ್ಯಾದಿ ದವಸ ಧಾನ್ಯಗಳನ್ನು ಶ್ರೀ ಮುತ್ತಪ್ಪ ದೇವಾಲಯ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಕಛೇರಿಗೆ ತಲುಪಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9448303607, 9972344243, 9731024083, 9980260283 ನ್ನು ಸಂಪರ್ಕಿಸಬಹುದಾಗಿದೆ.