Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ ಮೊರಾರ್ಜಿ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ : ಗ್ರಾಹಕರ ರಕ್ಷಣೆ ಎಲ್ಲರ ಹೊಣೆ : ಗೌರಮ್ಮಣಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ ಮೊರಾರ್ಜಿ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ : ಗ್ರಾಹಕರ ರಕ್ಷಣೆ ಎಲ್ಲರ ಹೊಣೆ : ಗೌರಮ್ಮಣಿ*

ಡಿಸೆಂಬರ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ  ಡಿ.27 NEWS DESK : ಜಿಲ್ಲಾಡಳಿತ, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ತಾಲ್ಲೂಕಿನ
ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ  ರಾಷ್ಟ್ರೀಯ ಗ್ರಾಹಕರ ದಿನಾಚರಣೆ: 2024  ನಡೆಯಿತು. ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣಿ, ಗ್ರಾಹಕರ ಹಕ್ಕುಗಳು ಮತ್ತು ಹಿತರಕ್ಷಣೆ
ಎಲ್ಲರ ಹೊಣೆಯಾಗಿದೆ.ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳುವ ಮೂಲಕ ಗ್ರಾಹಕರ ಹಿತರಕ್ಷಣೆಯನ್ನು ಕಾಪಾಡಬೇಕು ಎಂದರು. ಗ್ರಾಹಕರು ಅಂದರೆ ನಾವೆಲ್ಲರೂನಾವು ಇಂದು ನಮ್ಮ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಖರೀದಿದಾರನ ಯೋಗಕ್ಷೇಮದ ದೃಷ್ಟಿ ಗ್ರಾಹಕ ಹಕ್ಕುಗಳು ಅವಶ್ಯಕತೆ ಇದೆ. ಮಾರುಕಟ್ಟೆ ವ್ಯವಸ್ಥೆಯು ಇಂದು ನೈತಿಕತೆಗಳು ಹಾಗೂ ಮೌಲ್ಯಗಳ ಮೇಲೆ ನಡೆಯಬೇಕು. ಆಗ ಮಾತ್ರ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು. ಕೆಲವೊಮ್ಮೆ ಗ್ರಾಹಕರ ಹಕ್ಕುಗಳ ತಿಳಿದಿರದೇ ಇರುವುದು ಕೂಡ ನಮಗೆ ಒಳಿತಲ್ಲ. ಇದನ್ನು ಜನ ದುರುಪಯೋಗ ಪಡಿಸಿಕೊಳ್ಳಬಹುದು. ಗ್ರಾಹಕರ ರಕ್ಷಣೆ ಮತ್ತು ಧ್ವನಿಯು ಸಮಾಜದ ಹಿತರಕ್ಷಣೆಯಾದಾಗ‌ ಮಾತ್ರ ಗ್ರಾಹಕರ ಸಂರಕ್ಷಣೆ ಸಾಧ್ಯ ಎಂದು ಗೌರಮ್ಮಣಿ ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಡಾ ರೇಣುಕಾಂಭ‌ ಮಾತನಾಡಿ, ಪ್ರತಿವರ್ಷ ಡಿಸೆಂಬರ್‌ 24ರಂದು ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. ಗ್ರಾಹಕರು ಅಂದರೆ ನಾವು ಈ ಹಕ್ಕುಗಳ ಬಗ್ಗೆ ಶಿಕ್ಷಣ ಪಡೆಯುವುದು ಮತ್ತು ಅವುಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಭ್ಯಾಸ ಮಾಡುವುದು ಮುಖ್ಯವಾಗುತ್ತದೆ ಎಂದರು. ಗ್ರಾಹಕರು ಯಾವುದೇ ವಸ್ತು, ಸರಕುಗಳನ್ನು ಖರೀದಿಸುವ ಸಂದರ್ಭದಲ್ಲಿ ಆ ವಸ್ತುವಿನ ಗುಣಮಟ್ಟ, ಅವಧಿ ಇವನ್ನೆಲ್ಲಾ ಪರಿಶೀಲಿಸಿ ಕಡ್ಡಾಯವಾಗಿ ರಶೀದಿಯನ್ನು ಪಡೆದುಕೊಳ್ಳಬೇಕು. ಖರೀದಿಸಿದ ವಸ್ತುವಿನ ಗುಣಮಟ್ಟ ಕಳಪೆ ಮತ್ತು ದೋಷಪೂರಿತವಾಗಿದ್ದಲ್ಲಿ ಅಂತಹ ಸಂದರ್ಭದಲ್ಲಿ ಗ್ರಾಹಕರು ರಶೀದಿಯೊಂದಿಗೆ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದರೆ ಗ್ರಾಹಕರಿಗೆ ಕಾನೂನಿನಡಿ ಸೂಕ್ತ ಪರಿಹಾರ ಒದಗಿಸಲು ಸಾಧ್ಯವಾಗುತ್ತದೆ ಎಂದು ಡಾ ರೇಣುಕಾಂಭ‌ ತಿಳಿಸಿದರು. ಗ್ರಾಹಕರ ಹಕ್ಕುಗಳು ಹಾಗೂ ಜವಾಬ್ದಾರಿ ಕುರಿತು ಮಾಹಿತಿ ನೀಡಿದ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್ , ಗ್ರಾಹಕರ ಹಕ್ಕುಗಳು ಇಂತಹ ಅನ್ಯಾಯದ ಆಚರಣೆಗಳ ವಿರುದ್ಧ ಗ್ರಾಹಕರನ್ನು ರಕ್ಷಿಸುತ್ತದೆ ಮತ್ತು ಈ ಹಕ್ಕುಗಳನ್ನು ಜಾರಿಗೊಳಿಸಲು ಅವರಿಗೆ ಅನುವು ಮಾಡಿಕೊಡುತ್ತದೆ. ಗ್ರಾಹಕರು ಗ್ರಾಹಕರ ಹಕ್ಕುಗಳ ಬಗ್ಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಭಾರತದಲ್ಲಿ, ಸರ್ಕಾರವು ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು1986 ರ ಗ್ರಾಹಕ ಸಂರಕ್ಷಣಾ ಕಾಯಿದೆಯೊಂದಿಗೆ 2019 ರ ಅಡಿಯಲ್ಲಿ ಗ್ರಾಹಕರ ಹಕ್ಕುಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ , ರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ಮಹತ್ವ ಹಾಗೂ ಗ್ರಾಹಕರ ಹಕ್ಕುಗಳು ಮತ್ತು ಜವಾಬ್ದಾರಿಗಳು ಕುರಿತು ಉಪನ್ಯಾಸ ನೀಡಿದರು. ಗ್ರಾಹಕ ಸಂರಕ್ಷಣಾ ಕಾಯಿದೆ
ಹಾಗೂ ಗ್ರಾಹಕ ಜವಾಬ್ದಾರಿಗಳು ಕುರಿತು ಮಾಹಿತಿ ನೀಡಿದ ಅವರು, ಗ್ರಾಹಕ ಹಕ್ಕುಗಳು,ಸುರಕ್ಷತೆಯ ಹಕ್ಕು, ಆಯ್ಕೆ ಮಾಡುವ ಹಕ್ಕು, ತಿಳಿಸುವ ಹಕ್ಕು, ಗ್ರಾಹಕ ಶಿಕ್ಷಣದ ಹಕ್ಕು, ಕೇಳುವ ಹಕ್ಕು, ಪರಿಹಾರ ಹುಡುಕುವ ಹಕ್ಕು ಹಾಗೂ ಗ್ರಾಹಕರ ಹಕ್ಕುಗಳ ಕುರಿತು ಅವರು ಮಾಹಿತಿ ನೀಡಿದರು. ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್ ಮಾತನಾಡಿ, ಇಂತಹ ಕಾರ್ಯಕ್ರಮಗಳು ಗ್ರಾಹಕರ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲು ಸಹಕಾರಿಯಾಗಿವೆ ಎಂದರು. ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಕೋಶಾಧಿಕಾರಿ ಕೆ.ಎಂ.ಗಿರೀಶ್, ಕೂಡಿಗೆ ಸರ್ಕಾರಿ ಪಿಯೂ ಕಾಲೇಜು ಅಭಿವೃದ್ಧಿ ಸಮಿತಿಯ ‌ಮಾಜಿ ಅಧ್ಯಕ್ಷ ‌ಕೆ.ಕೆ.ನಾಗರಾಜಶೆಟ್ಟಿ , ನ್ಯಾಯಬೆಲೆ ಅಂಗಡಿಗಳ ಪ್ರಮುಖರು ಇಲಾಖೆಯ ಅಧಿಕಾರಿಗಳು, ನಾಗರಿಕರು ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಗ್ರಾಹಕರ. ಹಕ್ಕುಗಳು , ವಸ್ತುಗಳ ಖರೀದಿಸುವ ಸಂದರ್ಭದಲ್ಲಿ ಉಂಟಾಗುವ ಮೋಸ, ವಂಚನೆಗಳ ಕುರಿತು ನಡೆದ ಸಂವಾದದಲ್ಲಿ
ನಾಗರಿಕರು ಹಾಗೂ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಸಂಪನ್ಮೂಲ ವ್ಯಕ್ತಿಗಳು ಸೂಕ್ತ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.