ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂತಾಪ ಸೂಚಿಸಲಾಯಿತು. ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಂತಾಪ ಸೂಚಿಸಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡ ಟಿ.ಪಿ.ರಮೇಶ್, ಮಂದ್ರಿರ ಮೋಹನ್‍ದಾಸ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಮಾಜಿ ಅಧ್ಯಕ್ಷ ಚುಮ್ಮಿ ದೇವಯ್ಯ, ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಸೇವಾದಳದ ಅಧ್ಯಕ್ಷ ಕಾನೆ ಹಿತ್ಲು ಮೊಣ್ಣಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಮಾಜಿ ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ, ಪ್ರಮುಖರಾದ ವಿ.ಪಿ.ಸುರೇಶ್, ಸದಾಮುದ್ದಪ್ಪ, ಲೀಲಶೇಷಮ್ಮ ಉಪಸ್ಥಿತರಿದ್ದು, ಮನಮೋಹನ್ ಸಿಂಗ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.