ಮಡಿಕೇರಿ NEWS DESK ಡಿ.27 : ಅಪರಾಧ ಪ್ರಕರಣಗಳ ಪತ್ತೆಯಲ್ಲಿ ಪೊಲೀಸ್ ಇಲಾಖೆಗೆ ಹೆಚ್ಚು ಪರಿಣಾಮಕಾರಿಯಾಗಿ ಸಹಾಯ ಮಾಡಬಲ್ಲ ವಿಭಾಗಗಳಲ್ಲಿ ಶ್ವಾನದಳವೂ ಒಂದು. ಕ್ಲಿಷ್ಟಕರ ಪ್ರಕರಣಗಳನ್ನು ಸುಲಭವಾಗಿ ಬೇಧಿಸಲು ಕೊಡಗು ಜಿಲ್ಲೆಯ ದಕ್ಷ ಪೊಲೀಸ್ ಅಧಿಕಾರಿಗಳಿಗೆ ಶ್ವಾನದಳದ ಕಾಪರ್ ಹಾಗೂ ಬ್ರೂನೊ ಶ್ವಾನಗಳು ಹೆಚ್ಚು ಸಹಕಾರಿಯಾಗಿವೆ.
ಮಾದಕ ವಸ್ತುಗಳ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಕಾಪರ್ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಪೊಲೀಸ್ ಇಲಾಖೆಯಿಂದ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ. ಅಪರಾಧ ಪತ್ತೆಯಲ್ಲಿ ಬ್ರೂನೊ ಶ್ವಾನ ರಾಜ್ಯದಲ್ಲಿಯೇ ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಕಂಚಿನ ಪದಕಕ್ಕೆ ಭಾಜನವಾಗಿದೆ.NEWS DESK
ಕೊಡಗು ಜಿಲ್ಲಾ ಪೊಲೀಸ್ ನ ಜಿಲ್ಲಾ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಎರಡು ಶ್ವಾನಗಳಿಗೆ ಪದಕ ಹಾಗೂ ಪ್ರಶಂಸನಾ ಪತ್ರ ಪ್ರದಾನ ಮಾಡಿದರು. ಸ್ವತ: ಕಾಪರ್ ಹಾಗೂ ಬ್ರೂನೊ ಪದಕ ಪಡೆದುಕೊಳ್ಳುವ ಮೂಲಕ ನೆರೆದಿದ್ದವರ ಚಪ್ಪಾಳೆ ಗಿಟ್ಟಿಸಿಕೊಂಡವು.
ಮುAದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಜಾರ್ಕಂಡ್ ರಾಜ್ಯದ ರಾಂಚಿಯಲ್ಲಿ ನಡೆಯುವ ಆಲ್ ಇಂಡಿಯಾ ಪೊಲೀಸ್ ಮೀಟ್ ನಲ್ಲಿ ಕಾಪರ್ ಪಾಲ್ಗೊಳ್ಳುತ್ತಿರುವುದು ವಿಶೇಷ.NEWS DESK
ಜಿಲ್ಲಾ ಸಶಸ್ತ್ರ ದಳದ ಸಹಾಯಕ ಪೊಲೀಸ್ ನಿರೀಕ್ಷಕ ಜಿತೇಂದ್ರ ಅವರ ಉಸ್ತುವಾರಿಯಲ್ಲಿ ಕಾಪರ್ ಹಾಗೂ ಬ್ರೂನೊ ಶ್ವಾನಗಳನ್ನು ಪೊಲೀಸ್ ಸಿಬ್ಬಂದಿಗಳಾದ ಮನಮೋಹನ್ ಬಿ.ಪಿ, ಸಿದ್ದನಗೌಡ ಪಾಟೀಲ್, ವಿಜಯ ಹಾಗೂ ಪ್ರದೀಪ್ ಕುರುವತ್ತಿ ನಿರ್ವಹಿಸುತ್ತಿದ್ದಾರೆ.NEWS DESK