ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಂತಾಪ ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರುಗಳು, ಸಂಸದರು, ಶಾಸಕರು, ಪಕ್ಷದ ನಾಯಕರುಗಳೊಂದಿಗೆ ಪಾಲ್ಗೊಂಡು ಡಾ.ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅಂತಿಮ ನಮನ ಸಲ್ಲಿಸಿದರು.