ಕುಶಾಲನಗರ NEWS DESK ಡಿ.29 : ಮರಗೋಡಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಜಾತ್ರಾ ಮಹೋತ್ಸವದ ಸಂದರ್ಭ ವಸ್ತç ಸಂಹಿತೆ ಕುರಿತು ನಡೆದ ಭಿನ್ನಾಭಿಪ್ರಾಯವನ್ನು ನೆಪ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಬರಹ ಪೋಸ್ಟ್ ಮಾಡುತ್ತಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕುಶಾಲನಗರ ಗೌಡ ಸಮಾಜ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಾವಶ್ಯಕ ಹೇಳಿಕೆಗಳನ್ನು ನೀಡಿ ಜಿಲ್ಲೆಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತಿದೆ. ಇಬ್ಬರು ವ್ಯಕ್ತಿಗಳು ಪ್ರಚೋದನಕಾರಿ ಬರಹದ ಮೂಲಕ ಘರ್ಷಣೆಗೆ ಅವಕಾಶ ಕಲ್ಪಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ತಕ್ಷಣ ಇವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಗೌಡ ಸಮಾಜಗಳ ಒಕ್ಕೂಟದ ಪ್ರಮುಖ ಕರಂದ್ಲಾಜೆ ಆನಂದ್, ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಚೆರಿಯಮನೆ ರಷಿ ಹರೀಶ್, ಪದ್ಮಾವತಿ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಚೀಯಂಡಿ ಶಾಂತಿ, ನಿವೃತ್ತ ಗೌಡ ಸೈನಿಕರ ಸಂಘದ ಅಧ್ಯಕ್ಷ ದೇವಜನ ಚಿನ್ನಪ್ಪ ಮತ್ತಿತರರು ದೂರು ಸಲ್ಲಿಸುವ ಸಂದರ್ಭ ಹಾಜರಿದ್ದರು.