ಸಿಯೋಲ್ NEWS DESK ಡಿ.29 : ರನ್‌ವೇಯಲ್ಲಿ ವಿಮಾನ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಕಾರಣ ಸುಮಾರು 85 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ನಡೆದಿದೆ. 181 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್‌ವೇಯಲ್ಲಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿತು. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 85ಕ್ಕೇರಿದೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ.









