ಮೈಸೂರು NEWS DESK ಡಿ.29 : ಮೈಸೂರಿನಲ್ಲಿ ಹನುಮ ಜಯಂತಿಯ ಪ್ರಯುಕ್ತ ಮೈಸೂರು ಹನುಮಂತೋತ್ಸವ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 6ನೇ ವರ್ಷದ ಹನುಮ ಹಬ್ಬ ಹಾಗೂ ಶ್ರೀ ಆಂಜನೇಯಸ್ವಾಮಿಯ ಭವ್ಯ ಮೆರವಣಿಗೆಯ ಕಾರ್ಯಕ್ರಮದಲ್ಲಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಪಾಲ್ಗೊಂಡರು. ವಿಶೇಷ ಪೂಜೆ ಸಲ್ಲಿಸಿದ ಅವರು ಯುವ ಸಮೂಹದೊಂದಿಗೆ ಹೆಜ್ಜೆ ಹಾಕಿದರು.