ಮಡಿಕೇರಿ NEWS DESK ಡಿ.29 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದಲ್ಲಿ ಡಿ.27 ರಂದು ಜಾತ್ರೋತ್ಸವದ ಸಂದರ್ಭ ಎರಡು ಗುಂಪುಗಳ ನಡುವೆ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಶ್ರೀ ಮಹಾಮೃತ್ಯುಂಜಯ ದೇವಾಲಯದ ಸುತ್ತಮುತ್ತಲಿನ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು 2024 ಡಿ.30ರ ಬೆಳಿಗ್ಗೆ 6 ಗಂಟೆಯಿಂದ 2025 ಜನವರಿ 2ರ ಬೆಳಿಗ್ಗೆ 6 ಗಂಟೆಯವರೆಗೆ 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ರ‍್ಯಾಲಿ, ಜಾಥಾ ನಡೆಸದಂತೆ ಮತ್ತು ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶಿಸಿದೆ. ಕಾನೂನು ಸುವ್ಯವಸ್ಥೆ ಮತ್ತು ಆಂತರಿಕಾ ಭದ್ರತೆ ದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಉಪವಿಭಾಗಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಅವರು ಈ ಆದೇಶ ಹೊರಡಿಸಿದ್ದಾರೆ. ಡಿ.27 ರಂದು ಜಾತ್ರೋತ್ಸವಕ್ಕೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಬಂದ ಕೊಡವರನ್ನು ಕೆಲವರು ತಡೆದಿದ್ದಾರೆ. ಕೊಡವ ಉಡುಪು ಕುಪ್ಯಚೇಲೆಯನ್ನು ಕಳಚುವಂತೆ ಒತ್ತಡ ಹೇರಿದ್ದಾರೆ ಎನ್ನುವ ಆರೋಪವಿದೆ. ಇದರಿಂದ ಅಸಮಾಧಾನಗೊಂಡ ಕೊಡವ ಸಮುದಾಯದ ಮಂದಿ ಡಿ.30 ರಂದು ಶ್ರೀ ಮಹಾಮೃತ್ಯುಂಜಯ ದೇವಾಲಯಕ್ಕೆ ಜಾಥಾ ನಡೆಸಲು ನಿರ್ಧರಿಸಿದ್ದರು. ಈ ನಡುವೆ ಗೌಡ ಸಮುದಾಯದವರು ಕೂಡ ಡಿ.30 ರಂದು ದೇವಾಲಯಕ್ಕೆ ದೊಡ್ಡ ಸಂಖ್ಯೆಯಲ್ಲಿ ತೆರಳಲು ಇಂದು ನಡೆಸಿದ ಗೌಡ ಸಮಾಜದ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದರು. ಇದನ್ನು ಮನಗಂಡ ಕೊಡಗು ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ತಿಳಿದು ಬಂದಿದೆ.
Breaking News
- *ಕುಶಾಲನಗರ ತಾಲ್ಲೂಕು ಸೌಂದರ್ಯ ವರ್ಧಕ ಸಂಘದಿಂದ ತರಬೇತಿ ಕಾರ್ಯಾಗಾರ*
- *ಬಾಕ್ಸಿಂಗ್ ಸ್ಪರ್ಧೆಯಲ್ಲಿ ಕೊಡಗಿನ ಬಳಪಂಡ ಪಂಚಮಿಗೆ ಬೆಳ್ಳಿ ಪದಕ*
- *ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಮಿತಿ ಮೀರಿದ ವನ್ಯಜೀವಿ ಉಪಟಳ : ಅನಾಹುತ ಸಂಭವಿಸಿದರೆ ಅರಣ್ಯ ಅಧಿಕಾರಿಗಳೇ ನೇರ ಹೊಣೆ : ಬಿಜೆಪಿ ಎಚ್ಚರಿಕೆ*
- *ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಜ.23 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
- *ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಪ್ರದಾನ*
- *ಕೊಡಗು ಔಷಧಿ ವ್ಯಾಪಾರಸ್ಥರ ಸಂಘದಿಂದ ಜ.24 ರಂದು ರಕ್ತ ಸಂಗ್ರಹಣೆ ಶಿಬಿರ*
- *ಚಿತ್ರಕಲೆ ಸ್ಪರ್ಧೆಯಲ್ಲಿ ಎ.ಎಂ.ಡಿಯಾ ಪ್ರಥಮ*
- *ದಲೈಲಾಮಾ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ ದಂಪತಿ*
- *ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ ಮನೆಗೆ ಲಗ್ಗೆ ಇಟ್ಟ ಕಾಡಾನೆ*
- *ಕಾಡಾನೆ ದಾಳಿಯಿಂದ ಕೃಷಿಕ ಸಾವು*