ಕುಶಾಲನಗರ NEWS DESK ಡಿ.29 : ಯುವ ಪೀಳಿಗೆ ಜೀವನದ ಬಹುತೇಕ ಸಮಯವನ್ನು ಸಮಾಜದ ಒಳಿತಿಗಾಗಿ, ದೇಶದ ಅಭಿವೃದ್ಧಿಗಾಗಿ ಮೀಸಲಿಡಬೇಕು ಎಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಾವೇರಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಶಾಲನಗರಕ್ಕೆ ಆಗಮಿಸಿದ ಸಂದರ್ಭ ಅವರು ಕುಶಾಲನಗರ ವಿವೇಕಾನಂದ ಪಿ ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬರು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆ ಶಿಸ್ತು ದೃಢತೆ ಮೂಲಕ ಗುರಿ ಸಾಧಿಸಲು ಸಾಧ್ಯ ಎಂದ ಅವರು, ಸ್ವಾಮಿ ವಿವೇಕಾನಂದರ ಕೆಲವು ದೃಷ್ಟಾಂತಗಳನ್ನು ನೆನಪಿಸಿದರು. ಹಣದ ವ್ಯಾಮೋಹ ಮರೆತು ತಮ್ಮ ಉದ್ದೇಶಗಳ ಈಡೇರಿಕೆಗೆ ಸದಾ ಚಟುವಟಿಕೆಯಲ್ಲಿರಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಏಕಾಗ್ರತೆಯ ಕೊರತೆ ಎದ್ದು ಕಾಣುತ್ತಿದೆ. ತರಗತಿಗಳಲ್ಲಿ ವಿದ್ಯಾರ್ಥಿಗಳ ಮನೋಬಲವನ್ನು ಕನಿಷ್ಠ ಅವಧಿ ಕೂಡ ಹಿಡಿದಿಟ್ಟುಕೊಳ್ಳುವಲ್ಲಿ ನಾವು ವಿಫಲರಾಗುತ್ತಿದ್ದೇವೆ. ಕನಿಷ್ಠ ಕೆಲವೇ ಸೆಕೆಂಡುಗಳಷ್ಟು ಅವಧಿಯ ಏಕಾಗ್ರತೆ ಹೊಂದುವ ಮನಸ್ಥಿತಿ ಮಕ್ಕಳಲ್ಲಿ ಇಲ್ಲದಂತಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಯಾವುದೇ ಕೆಲಸದಲ್ಲಿಯೂ ಹಿಂಜರಿಕೆ ಸಲ್ಲದು, ಗುರಿ ತಲಪುವ ತನಕ ಸಾಧನೆ ಮಾಡುವ ಪ್ರಯತ್ನ ನಿರಂತರವಾಗಿ ಸಾಗಬೇಕು. ತಮ್ಮಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರ ತರುವ ನಿಟ್ಟಿನಲ್ಲಿ ಸದಾ ಜಾಗೃತರಾಗಬೇಕು. ಪೋಷಕರು ಮಕ್ಕಳನ್ನು ಕೇವಲ ಪದವಿ ಪಡೆಯುವ ಯಂತ್ರಗಳನ್ನಾಗಿಸುವುದು ಸರಿಯಲ್ಲ. ಸಮಾಜದ ಆಗು ಹೋಗುಗಳ ಬಗ್ಗೆ ಅರಿವು ಜಾಗೃತಿ ಮೂಡಿಸಬೇಕಾಗಿದೆ ಎಂದರು. ಇಂದಿನ ದಿನಗಳಲ್ಲಿ ಪುಸ್ತಕಗಳನ್ನು ಓದುವವರ ಸಂಖ್ಯೆ ಕ್ಷೀಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಹೇಳಿದರು. ವಿಶ್ವದಲ್ಲಿಯೇ ಅಪರೂಪವಾದ ಸಂಸ್ಕೃತಿ ನಮ್ಮ ದೇಶದಲ್ಲಿದ್ದು ಅದನ್ನು ನಶಿಸಿ ಹೋಗದಂತೆ ಎಚ್ಚರ ಅಗತ್ಯ ಎಂದರು. ಕುಶಾಲನಗರ ವಿವೇಕಾನಂದ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಶಂಭುಲಿಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ ಎನ್ ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಿವೇಕಾನಂದ ಕಾಲೇಜು ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*