ಮಡಿಕೇರಿ NEWS DESK ಡಿ.29 : ಬ್ರಹ್ಮಾಕುಮಾರೀಸ್ ಲೈಟ್ ಹೌಸ್ ಸಭಾಂಗಣದಲ್ಲಿ ಇಂದು ಈಶ್ವರೀಯ ಸೇವೆಯ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಧ್ಯಾನ ಕಾರ್ಯಕ್ರಮ ನಡೆಯಿತು. ಪದ್ಮಶ್ರೀ ಪ್ರಶಸ್ತಿ ವಿಜೇತ ಕಲಾವಿದೆ ರಾಣಿ ಮಾಚಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೃದ್ದಾಪ್ಯದಲ್ಲಿ ಮಾತಾಪಿತರನ್ನು ತುಂಬಾ ಪ್ರೀತಿಯಿಂದ ಜೋಪಾನವಾಗಿ ಪಾಲನೆ ಮಾಡುವುದು ಬಹಳ ಅವಶ್ಯಕವಾಗಿದೆ. ಯಾವುದೇ ರೀತಿಯಲ್ಲಿ ಅವರನ್ನು ದೂರ ಮಾಡುವ ಸಂದರ್ಭ ಅಥವಾ ಘಟನೆಗಳು ಎದುರಾದಲ್ಲಿ ಹಿತನುಡಿಗಳನ್ನು ಆಡಿ ಆ ಸಂಬಂಧವನ್ನು ಸರಿಪಡಿಸುವ ಕುರಿತು ಕಿವಿಮಾತು ಹೇಳಿದರು. ಪರಮಾತ್ಮನ ನೆನಪಿನ ಮೂಲಕ ಮನ:ಶಾಂತಿಗಾಗಿ ಹಾಗೂ ಜನರ ಉತ್ತಮ ಆರೋಗ್ಯಕ್ಕಾಗಿ ರಾಜಯೋಗದ ಅಗತ್ಯ ಎಷ್ಟಿದೆ, ಅದರ ಅಭ್ಯಾಸದಿಂದ ಜೀವನದಲ್ಲಿ ಅಪಾರ ಪ್ರಾಪ್ತಿಯನ್ನು ಮಾಡಿಕೊಳ್ಳುವ ಕುರಿತು ಕಳೆದ 44 ವರ್ಷಗಳಿಂದ ನಿರಂತರವಾಗಿ ಕೊಡಗಿನ ಜನರಿಗೆ ಜಾಗೃತಿಯನ್ನು ಮೂಡಿಸುತ್ತಾ ಬರುತ್ತಿರುವ ಈ ಸೇವೆಯ ಸ್ಮರಣಾರ್ಥವಾಗಿ ವಿಶೇಷ ಧ್ಯಾನದ ಕಾರ್ಯಕ್ರಮವನ್ನು ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬಿ.ಕೆ.ಗಾಯತ್ರೀಜಿ ಅವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಜಿಲ್ಲೆಯ 5 ಸೇವಾಕೇಂದ್ರಗಳ ಮುಖ್ಯ ಶಿಕ್ಷಕಿ ಸಹೋದರಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಲ್ಲಾ ಬ್ರಹ್ಮಾಕುಮಾರ ಬ್ರಹ್ಮಾಕುಮಾರಿಯರು ಭಾಗವಹಿಸಿ ವಿಶೇಷವಾಗಿ ಧ್ಯಾನದ ಮತ್ತು ಆಧ್ಯಾತ್ಮಿಕ ಚಿಂತನೆಯನ್ನು ನಡೆಸಲಾಯಿತು. ಇದೇ ಸಂದರ್ಭ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*