ಮಡಿಕೇರಿ NEWS DESK ಡಿ.29 : ಕೊಡಗಿನ ಗೌಡ ಸಮಾಜಗಳ ಮತ್ತು ಗೌಡ ಸಂಘಟನೆಗಳ ಪ್ರಮುಖರ ಸಭೆ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯಿತು. ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ನಡೆದ ಘಟನೆಯ ಕುರಿತು ಸಭೆ ಕೆಲವು ನಿರ್ಣಯಗಳನ್ನು ಕೈಗೊಂಡಿತು. ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದಲ್ಲಿ 1 ವರ್ಷದ ಹಿಂದೆ ನೂತನವಾಗಿ ನಿರ್ಮಾಣಗೊಂಡ ಮಹಾ ಮೃತ್ಯುಂಜಯ ಕ್ಷೇತ್ರದ ಪ್ರಥಮ ವಾರ್ಷಿಕೋತ್ಸವದ ಅಂತಿಮ ಹಂತದಲ್ಲಿ ದೇವಸ್ಥಾನದ ಕಟ್ಟುಪಾಡುಗಳನ್ನು ಹಾಗೂ ಸರ್ವ ಭಕ್ತಾದಿಗಳ ಸಮ್ಮತಿ ಮೇರೆ ಆಚರಣೆಯಲ್ಲಿದ್ದ ಬೈಲಾದ ನಿಯಮಗಳನ್ನು ಉಲ್ಲಂಘಿಸಿದ ಕ್ರಮವನ್ನು ಕೊಡಗಿನ ಸಮಸ್ತ ಗೌಡ ಜನತೆ ಖಂಡಿಸುವುದು. ಸಾಮಾಜಿಕ ಜಾಲತಾಣಗಳಲ್ಲಿ ಗೌಡ ಜನಾಂಗವನ್ನು ಅತ್ಯಂತ ಕೀಳು ಶಬ್ದಗಳಿಂದ ಜರೆದಿರುವ ವ್ಯಕ್ತಿಗಳ ವಿರುದ್ಧ ಹಾಗೂ ದೇವಸ್ಥಾನದ ಆವರಣದಲ್ಲಿ ಮಾರಕಾಸ್ತçವನ್ನು ತೋರಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸುವುದು. ಗೌಡ ಜನಾಂಗವನ್ನು ಜಾತಿ ನಿಂದನೆ ಮಾಡಿರುವ ಸಂಘಟನೆಯೊAದರ ವ್ಯಕ್ತಿಯ ವಿರುದ್ಧ ಖಂಡನಾ ನಿರ್ಣಯ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದು. ಸಾಮಾಜಿಕ ಜಾಲತಾಣಗಳಲ್ಲಿ ಗೌಡ ಜನಾಂಗವನ್ನು ನಿಂದಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೊಲೀಸ್ ಠಾಣೆಗಳಲ್ಲಿ ದೂರು ನೀಡಲು ಸಭೆ ನಿರ್ಣಯಿಸಿತು. ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಸೇರಿದಂತೆ ವಿವಿಧ ಗೌಡ ಸಮಾಜಗಳ, ಗೌಡ ಸಂಘಟನೆಗಳ ಪ್ರಮುಖರು ಹಾಗೂ ಕಟ್ಟೆಮಾಡು ಗೌಡ ಸಮುದಾಯ ಸಭೆಯಲ್ಲಿ ಉಪಸ್ಥಿತರಿದ್ದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*