ಮಡಿಕೇರಿ NEWS DESK ಡಿ.29 : ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಡಿ.24ರ ಸಂಜೆ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧ ದಿವಿನ್(28) ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ನಿಧನ ಹೊಂದಿದರು. ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ನಿವಾಸಿ ದಿವಂಗತ ಪ್ರಕಾಶ್-ಜಯ ದಂಪತಿ ಪುತ್ರ ದಿವಿನ್ ಮೃತ ದುರ್ದೈವಿ. ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದ್ದ ದಿವಿನ್ ಅವರನ್ನು ಶ್ರೀನಗರ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ದಿವಿನ್ ತಾಯಿ ಜಯ ಅವರು ಗುರುವಾರ ಸಂಜೆ ಶ್ರೀನಗರಕ್ಕೆ ತೆರಳಿದ್ದರು. ದಿವಿನ್ ತನ್ನ ತಾಯಿಗೆ ಏಕೈಕ ಆಸರೆಯಾಗಿದ್ದು, 10 ವರ್ಷದ ಹಿಂದೆ ಸೇನೆಗೆ ಸೇರಿದ್ದರು. ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿದ್ದು, 2025ರ ಫೆಬ್ರವರಿಯಲ್ಲಿ ವಿವಾಹ ನಿಶ್ಚಿಯವಾಗಿತ್ತು. ಆಮಂತ್ರಣ ಪತ್ರವೂ ಮುದ್ರಣಗೊಂಡಿದೆ. ಆಲೂರು ಸಿದ್ದಾಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಸೋಮವಾರ ಅಥವಾ ಮಂಗಳವಾರ ಪಾರ್ಥೀವ ಶರೀರ ಕೊಡಗಿಗೆ ಬರುವ ಸಾಧ್ಯತೆಗಳಿದೆ. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ದಿವಿನ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
Breaking News
- *ಕುಶಾಲನಗರ ತಾಲ್ಲೂಕು ಸೌಂದರ್ಯ ವರ್ಧಕ ಸಂಘದಿಂದ ತರಬೇತಿ ಕಾರ್ಯಾಗಾರ*
- *ಬಾಕ್ಸಿಂಗ್ ಸ್ಪರ್ಧೆಯಲ್ಲಿ ಕೊಡಗಿನ ಬಳಪಂಡ ಪಂಚಮಿಗೆ ಬೆಳ್ಳಿ ಪದಕ*
- *ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಮಿತಿ ಮೀರಿದ ವನ್ಯಜೀವಿ ಉಪಟಳ : ಅನಾಹುತ ಸಂಭವಿಸಿದರೆ ಅರಣ್ಯ ಅಧಿಕಾರಿಗಳೇ ನೇರ ಹೊಣೆ : ಬಿಜೆಪಿ ಎಚ್ಚರಿಕೆ*
- *ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಜ.23 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
- *ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಪ್ರದಾನ*
- *ಕೊಡಗು ಔಷಧಿ ವ್ಯಾಪಾರಸ್ಥರ ಸಂಘದಿಂದ ಜ.24 ರಂದು ರಕ್ತ ಸಂಗ್ರಹಣೆ ಶಿಬಿರ*
- *ಚಿತ್ರಕಲೆ ಸ್ಪರ್ಧೆಯಲ್ಲಿ ಎ.ಎಂ.ಡಿಯಾ ಪ್ರಥಮ*
- *ದಲೈಲಾಮಾ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ ದಂಪತಿ*
- *ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ ಮನೆಗೆ ಲಗ್ಗೆ ಇಟ್ಟ ಕಾಡಾನೆ*
- *ಕಾಡಾನೆ ದಾಳಿಯಿಂದ ಕೃಷಿಕ ಸಾವು*