ಮಡಿಕೇರಿ ಡಿ.30 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕೊಮ್ಮೆತೋಡು ಹಾತೂರು ರಸ್ತೆಯ ದುರಸ್ತಿ ಕಾಮಗಾರಿಯು ಭರದಿಂದ ಸಾಗಿದೆ. ಈ ಭಾಗದಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಯು ತೀವ್ರ ಹಾನಿಗೊಳಗಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ವಿಶೇಷ ಅನುದಾನವನ್ನು ತರಿಸುವಲ್ಲಿ ಯಶಸ್ವಿಯಾಗಿದ್ದು, ಗುಣಮಟ್ಟದ ರಸ್ತೆ ಕಾಮಗಾರಿಯನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಕಾಮಗಾರಿ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಜನ ಸಂಚಾರಕ್ಕೆ ಮುಕ್ತವಾಗಲಿದೆ. ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.