ನಾಪೋಕ್ಲು ಡಿ.30 NEWS DESK : ನಾಪೋಕ್ಲು ಕೊಡವ ಸಮಾಜದ ಬೆಳ್ಳಿ ಹಬ್ಬದ ಆಚರಣೆ ಅಂಗವಾಗಿ ಮಾರುಕಟ್ಟೆ ಆವರಣದಿಂದ ಆರಂಭಗೊಂಡ ಮೆರವಣಿಗೆ ವೀಕ್ಷಕರ ಗಮನ ಸೆಳೆಯಿತು. ಸುಮಾರು ಒಂದು ಗಂಟೆಗಳ ಕಾಲ ಸಾಗಿದ ಮೆರವಣಿಗೆಯಲ್ಲಿ ಕೊಡವ ಸಂಸ್ಕೃತಿಯ ವೈವಿಧ್ಯಮಯ ಕಲೆಗಳು ಅನಾವರಣಗೊಂಡವು. ಕೊಡವ ವಾಲಗಕ್ಕೆ ಸಾಂಪ್ರದಾಯಿಕ ಉಡುಗೆತೊಡುಗೆಯೊಂದಿಗೆ ನರ್ತಿಸುತ್ತಾ ಮೆರವಣಿಗೆಯಲ್ಲಿ ಸಾಗಿ ಸಂಭ್ರಮಿಸಿದರು. ಸ್ಥಳೀಯ ಮಾರುಕಟ್ಟೆ ಆವರಣದ ಬಳಿ ಕೊಡವ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೈಸೂರು ಕೊಡವ ಸಮಾಜದ ಅಧ್ಯಕ್ಷ ಪೊಂಜಾಂಡ ಎ. ಗಣಪತಿ ಗಾಳಿಗೆ ಗುಂಡು ಹೊಡೆಯುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮ :: ಕೊಡವ ಸಮಾಜದಲ್ಲಿ ಆಯೋಜಿಸಿದ ಸಭಾ ಕಾರ್ಯಕ್ರಮದಲ್ಲಿ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ ಅಧ್ಯಕ್ಷತೆಯಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಮೈಸೂರು ಕೊಡವ ಸಮಾಜದ ಅಧ್ಯಕ್ಷ ಪೊಂಜಾಂಡ ಎ.ಗಣಪತಿ ಪಾಲ್ಗೊಂಡು ಮಾತನಾಡಿ ಕೊಡವ ಸಂಸ್ಕೃತಿಯ ಆಚಾರ, ವಿಚಾರ, ಸಂಸ್ಕೃತಿ ತುಂಬ ಪುರಾತನವಾಗಿದ್ದು, ಅದನ್ನು ಉಳಿಸಿ ಬೆಳೆಸುವ ಅಗತ್ಯವಿದೆ. ಯುವಜನರು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಮುಂದಾಳತ್ವ ವಹಿಸಬೇಕು ಎಂದರು. ಈಶ್ವರಪ್ಪ ಇಗ್ಗುತ್ತಪ್ಪ ದೇವರ ಆಶೀರ್ವಾದದೊಂದಿಗೆ ಕೊಡವ ಸಮಾಜ 25 ವರ್ಷಗಳ ಅಭಿವೃದ್ಧಿ ಕಂಡಿದೆ. ಇದು ಮತ್ತಷ್ಟು ಅಭಿವೃದ್ಧಿ ಸಾಧಿಸಲಿ ಎಂದರು. ಈ ಸಂದರ್ಭ ಕೊಡವ ಸಮಾಜದ ವತಿಯಿಂದ ಅವರನ್ನು ಸನ್ಮಾನಿಸಿದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಕರವಂಡ ಪಿ.ನಾಣಯ್ಯ, ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ, ಸಹಕಾರ್ಯದರ್ಶಿ ಮಾಚೆಟ್ಟಿರ ಕುಶಾಲಪ್ಪ ಉಪಸ್ಥಿತರಿದ್ದರು.
ಕ್ರೀಡಾಕೂಟ :: ಸಮಾಜ ಬಾಂಧವರಿಗಾಗಿ ವಿವಿಧ ಸ್ಪರ್ಧೆಗಳು ನಡೆಯಿತು. ಉಮ್ಮತ್ತಾಟ್ ಸ್ಪರ್ಧೆಯನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಬೊಳಕಾಟ್ ಸ್ಪರ್ಧೆಯನ್ನು ಕೊಡವ ಸಮಾಜದ ಮಾಜಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಕೋಲಾಟ ಸ್ಪರ್ಧೆಯನ್ನು ನಾಪೋಕ್ಲು ಕೊಡವ ಸಮಾಜದ ಮಾಜಿ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚೆಂಗಪ್ಪ, ಕತ್ತಿಯಾಟ್ ಹಾಗೂ ಪರೆಯಕಳಿ ಸ್ಪರ್ಧೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ, ವಾಲಗತಾಟ್ ಮತ್ತು ಕಪ್ಪೆಯಾಟ್ ಸ್ಪರ್ಧೆಯನ್ನು ಬಲಂಬೇರಿಯ ಸಮಾಜ ಸೇವಕ ಬೊಳ್ಳಚೆಟ್ಟೀರ ಎಂ.ಸುರೇಶ್ ಉದ್ಘಾಟಿಸಿದರು. ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಪಾಲೂರಿನ ಸಮಾಜ ಸೇವಕ ಬೊಳ್ಳಿಯಂಡ ಪಿ.ಹರೀಶ್ ಕಾರ್ಯಪ್ಪ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆಯನ್ನು ಪೇರೂರಿನ ಕೊಡವ ಜಾನಪದ ತಜ್ಞ ಬೊಟ್ಟೋಳಂಡ ಕಾಶಿ ಅಚ್ಚಯ್ಯ ನೆರವೇರಿಸಿದರು. ತಿರ್ಪುಗಾರರಾಗಿ ಮುಲ್ಲೆಂಗಡ ಡಾ.ರೇವತಿ ಪೂವಯ್ಯ, ಬಲಡಚಂಡ ಕಸ್ತುರಿ, ನಾಣಮಂಡ ವೇಣು, ಕಾಳಿಮಾಡ ಮೋಟಯ್ಯ, ನಾಣಮಂಡ ದಿನೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಟ್ಟಿರ ಡಯಾನ ಪ್ರಾರ್ಥಿಸಿದರು. ಕುಲ್ಲೇಟಿರ ಅಜಿತ್ ನಾಣಯ್ಯ ಸ್ವಾಗತಿಸಿದರು. ಬಾಳೆಯಡ ದಿವ್ಯಮಂದಪ್ಪ ಹಾಗೂ ಬೊಟ್ಟೋಳಂಡ ವಿನಿತ ಮಾದಪ್ಪ ಕಾರ್ಯಕ್ರಮ ನಿರೂಪಿಸಿದರು. ಮಾಚೆಟ್ಟಿರ ಕುಶು ಕುಶಾಲಪ್ಪ ವಂದಿಸಿದರು.
ವರದಿ : ದುಗ್ಗಳ ಸದಾನಂದ.