ವಿರಾಜಪೇಟೆ ಡಿ.31 NEWS DESK : ಭರತನಾಟ್ಯ ಕ್ಷೇತ್ರದ ಸಾಧನೆಗಾಗಿ ಕರುನಾಡ ಭೂಷಣ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ವಿದ್ಯಾರ್ಥಿನಿ ಆಕಾಂಕ್ಷ ಭಾಜನಾಲಾಗಿದ್ದಾಳೆ. ವಿರಾಜಪೇಟೆ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ನ ವತಿಯಿಂದ ಬೆಂಗಳೂರಿನ ಕನ್ನಡ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಭರತನಾಟ್ಯದಲ್ಲಿ ಬಹುಮುಖ ಪ್ರತಿಭೆಯಾಗಿರುವ ಆಕಾಂಕ್ಷ ಮೂಲತಃ ಆರ್ಜಿ ಗ್ರಾಮದ ಭಾರತೀಯ ಸೇನೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ರತೀಶ್ ಆಚಾರ್ಯ ಹಾಗೂ ವಿನಾಯಕ ಶಾಲೆಯ ಮುಖ್ಯ ಶಿಕ್ಷಕಿ ಪ್ರತಿಮಾ ಆಚಾರ್ಯ ದಂಪತಿಗಳ ಪುತ್ರಿ.