ಸೋಮವಾರಪೇಟೆ ಡಿ.31 NEWS DESK : ಸರ್ಕಾರದ ಆದೇಶದಂತೆ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವವರಿಗೆ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬಂಧ ಅರ್ಜಿಗಳನ್ನು ನೀಡಲು ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ರೈತ ಹೋರಾಟ ಸಮಿತಿ ಹಾಗೂ ರೈತಸಂಘದ ಒತ್ತಾಯಿಸಿದೆ. ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಅರ್ಜಿ ಸ್ವೀಕರಿಸುವ ಕಾಲಾವಕಾಶ 31.12.2024ರಂದು ಮುಕ್ತಾಯಗೊಳ್ಳಲಿದ್ದು, ಮುಂದಿನ 3 ತಿಂಗಳ ವರಗೆ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂದರ್ಭ ತಾಲ್ಲೂಕು ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ದಿನೇಶ್, ಪ್ರಮುಖರಾದ ಅಶೋಕ್, ಆದಿತ್ಯ ಹರಗ, ಎಸ್.ಬಿ.ಭರತ್ ಕುಮಾರ್, ಯಡೂರು ಜಗದೀಶ್, ಲಿಂಗೇರಿ ರಾಜೇಶ್ ಇದ್ದರು.