ನಾಪೋಕ್ಲು ಡಿ.31 NEWS DESK : ಕ್ರೈಸ್ತ ಧರ್ಮ ಹಾಗೂ ಏಸು ಕ್ರಿಸ್ತರ ಕುರಿತು ಅವಹೇಳನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಪೋಕ್ಲುವಿನಲ್ಲಿ ಕ್ರೈಸ್ತ ಭಕ್ತಾಧಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ಸಂತ ಮೇರಿಮಾತೆಯ ದೇವಾಲಯದಲ್ಲಿ ದಿವ್ಯ ಬಲಿ ಪೂಜೆ ನಂತರ ಸಾಮೂಹಿಕವಾಗಿ ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್, ಇಂತಹ ಘಟನೆಗಳು ಮತ್ತೊಮ್ಮೆ ಮರುಕಳಿಸಬಾರದು. ತಪ್ಪಿತಸ್ಥರನ್ನು ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ವರದಿ : ದುಗ್ಗಳ ಸದಾನಂದ.