ಮಡಿಕೇರಿ ಡಿ.31 NEWS DESK : ರಾಷ್ಟ್ರಕವಿ ಕುವೆಂಪು ರಚಿತಜಯ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ ನಾಡಗೀತೆಯ ಆಶಯಕ್ಕೆ ನೂರು ವರ್ಷ ತುಂಬಿದೆ. ಅದರ ನೆನಪಿಗಾಗಿ ಸಹಸ್ರಕಂಠದಲ್ಲಿ ನಾಡಗೀತೆ ಹಾಡುವ ಕಾರ್ಯಕ್ರಮವನ್ನು ಮತ್ತು ರಾಷ್ಟ್ರಕವಿ ಕುವೆಂಪು 120ನೆಯ ಜನ್ಮ ದಿನಾಚರಣೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಇಲಾಖೆ, ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರಿ ಹಿರಿಯ ದರ್ಜೆ ಪದವಿ ಕಾಲೇಜು, ಪದವಿಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಜ.4 ರಂದು ಆಯೋಜಿಸಲಾಗಿದೆ. ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 9.45 ಗಂಟೆಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಮಂಜುಳಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಆಗಮಿಸಲಿದ್ದಾರೆ.
ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ. ಆರ್ ವಿಜಯ, ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಶಶಿಕಲಾ ಕೆ.ವಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಶೀಲ, ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಆರ್.ಪಿ ಚಂದ್ರಶೇಖರ್, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಿ.ಡಿ.ಶಿವಶಂಕರ್, ಪ್ರಾಥಮಿಕ ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಜಗದೀಶ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್ ತಿಳಿಸಿದ್ದಾರೆ.