Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಲ್ಲರೂ ಒಂದೇ ಎನ್ನುವ ಕಾರಣಕ್ಕೆ ಸಾಂಪ್ರದಾಯಿಕ ಉಡುಪಿಗೆ ಅವಕಾಶ ನೀಡಿಲ್ಲ : ಸರ್ವರೂ ಒಪ್ಪಿಕೊಂಡಿರುವ ಬೈಲಾಕ್ಕೆ ಅಧಿಕಾರಿಗಳು ಸಮ್ಮತಿ ಸೂಚಿಸಬೇಕು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಲ್ಲರೂ ಒಂದೇ ಎನ್ನುವ ಕಾರಣಕ್ಕೆ ಸಾಂಪ್ರದಾಯಿಕ ಉಡುಪಿಗೆ ಅವಕಾಶ ನೀಡಿಲ್ಲ : ಸರ್ವರೂ ಒಪ್ಪಿಕೊಂಡಿರುವ ಬೈಲಾಕ್ಕೆ ಅಧಿಕಾರಿಗಳು ಸಮ್ಮತಿ ಸೂಚಿಸಬೇಕು*

ಡಿಸೆಂಬರ್ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಡಿ.31 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡಿನ ಶ್ರೀಮಹಾ ಮೃತ್ಯುಂಜಯ ದೇವಾಲಯದಲ್ಲಿ ಶ್ರೀಮಂತ, ಬಡವ, ಜಾತಿ, ಜನಾಂಗ ಎನ್ನುವ ಬೇಧಭಾವವಿಲ್ಲದೆ ಹಿಂದೂ ಸಮಾಜದ ಎಲ್ಲಾ ಜನಾಂಗದವರು ಒಂದೇ ಎಂದು ಪರಿಗಣಿಸಲು ಯಾವುದೇ ಸಮುದಾಯದ ಸಾಂಪ್ರದಾಯಿಕ ಉಡುಪು ಧರಿಸಿ ದೇವಾಲಯಕ್ಕೆ ಬರಲು ದೇವಾಲಯ ಸಮಿತಿಯ ಬೈಲಾದಲ್ಲಿ ಅವಕಾಶ ನೀಡಿಲ್ಲ. ಸರ್ವರೂ ಒಪ್ಪಿಕೊಂಡಿರುವ ಬೈಲಾ ಇದಾಗಿರುವುದರಿಂದ ಅಧಿಕಾರಿಗಳು ಇದಕ್ಕೆ ಸಮ್ಮತಿ ಸೂಚಿಸಬೇಕೆಂದು ಎಸ್ ಕಟ್ಟೆಮಾಡು ಪರಂಬು ಪೈಸಾರಿಯ ಗಣಪತಿ ಸೇವಾ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಮಾಜಿ ಅಧ್ಯಕ್ಷ ಬಿ.ಕೆ.ಉಮೇಶ್ ಹಾಗೂ ಪ್ರಮುಖರು ಗ್ರಾಮದ ಎಲ್ಲಾ ಜನಾಂಗದವರು ಒಗ್ಗೂಡಿ, ಅವಿರತ ಶ್ರಮವಹಿಸಿ, ಕೋಟ್ಯಾಂತರ ರೂ. ಖರ್ಚು ಮಾಡಿ ಶ್ರೀಮಹಾ ಮೃತ್ಯುಂಜಯ ದೇವಾಲಯವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಒಗ್ಗಟ್ಟು ಹೀಗೆ ಉಳಿಯಬೇಕು, ದೇವರ ಎದುರು ಎಲ್ಲರೂ ಸಮಾನರು ಎನ್ನುವ ಕಾರಣಕ್ಕಾಗಿ ಬೈಲಾದಲ್ಲಿ ಸಾಂಪ್ರದಾಯಿಕ ಉಡುಪಿಗೆ ಅವಕಾಶ ನೀಡಿಲ್ಲ. ಗೌಡರಿಗೂ ಸಾಂಪ್ರದಾಯಿಕ ಉಡುಪು ಇದೆ, ಆದರೆ ಬೈಲಾದ ಪ್ರಕಾರ ಅವರು ನಡೆದುಕೊಳ್ಳುತ್ತಿದ್ದು, ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಬರುತ್ತಿಲ್ಲ ಎಂದರು. ಶ್ರೀಮಹಾ ಮೃತ್ಯುಂಜಯ ದೇವಾಲಯ ಸಮಿತಿಯ ಆಡಳಿತ ಮಂಡಳಿಯಲ್ಲಿ 43 ಪದಾಧಿಕಾರಿಗಳಿದ್ದಾರೆ. ಇವರಲ್ಲಿ ಕೊಡವರು, ಗೌಡರು, ಪರಿಶಿಷ್ಟರು ಸೇರಿದಂತೆ ಎಲ್ಲಾ ಜಾತಿ ಜನಾಂಗದವರಿದ್ದಾರೆ. ದೇವಾಲಯದಲ್ಲಿ ಯಾವುದೇ ರೀತಿಯ ಬೇಧಭಾವ, ಮೇಲು ಕೀಳು ಭಾವನೆ ಬರಬಾರದೆನ್ನುವ ಉದ್ದೇಶದಿಂದ ಯಾವುದೇ ಸಮಾಜದ ಸಾಂಪ್ರದಾಯಿಕ ಉಡುಪಿಗೆ ಅವಕಾಶ ನೀಡಬಾರದೆಂದು ಸರ್ವರ ಸಮ್ಮತಿಯೊಂದಿಗೆ ಬೈಲಾದಲ್ಲಿ ವಿಚಾರವನ್ನು ಅಳವಡಿಸಲಾಗಿದೆ. ಆಕ್ಷೇಪ ವ್ಯಕ್ತಪಡಿಸುವುದಾದರೆ ಅಭಿಪ್ರಾಯ ಸಂಗ್ರಹದ ಸಂದರ್ಭವೇ ವ್ಯಕ್ತಪಡಿಸಬೇಕಾಗಿತ್ತು. ಆದರೆ ಜಾತ್ರೋತ್ಸವ ನಡೆಯುತ್ತಿದ್ದಾಗ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸಲಾಗಿದೆ ಎಂದು ಆರೋಪಿಸಿದರು. ಡಿ.27 ರಂದು ಕೊಡವರು ಕೂಡ ನೂರಾರು ಸಂಖ್ಯೆಯಲ್ಲಿ ಸಾಮಾನ್ಯ ಭಕ್ತರಂತೆ ದೇವಾಲಯಕ್ಕೆ ಬಂದಿದ್ದರು. ಆದರೆ ದೇವರ ಜಳಕದ ಸಂದರ್ಭ ಕೆಲವು ಮಂದಿ ಮಾತ್ರ ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದ್ದಾರೆ. ಬೈಲಾದಲ್ಲಿರುವಂತೆ ನಡೆದುಕೊಳ್ಳಬೇಕು ಎಂದು ತಿಳಿಸಿದಾಗ ಭಿನ್ನಾಭಿಪ್ರಾಯ ಮೂಡಿದೆ ಹೊರತು ಯಾವುದೇ ಹಲ್ಲೆ ಪ್ರಕರಣಗಳು ನಡೆದಿಲ್ಲ. ಮಹಿಳೆಯರ ಮೇಲೆ ಹಲ್ಲೆಯಾಗಿಲ್ಲ, ದೇವಾಲಯದ ಸಿಸಿ ಕ್ಯಾಮರಾದಲ್ಲಿ ಎಲ್ಲಾ ಸತ್ಯಾಂಶಗಳು ಸೆರೆಯಾಗಿದೆ. ವಿನಾಕಾರಣ ಸಾಮಾಜಿಕ ಜಾಲತಾಣಗÀಳಲ್ಲಿ ಸುಳ್ಳು ವದಂತಿ ಹಬ್ಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಎಲ್ಲಾ ದೇವಾಲಯಕ್ಕೆ ಒಂದೊAದು ಕಟ್ಟುಪಾಡು ಇರುವ ಹಾಗೆ ಶ್ರೀ ಮಹಾಮೃತ್ಯುಂಜ ದೇವಾಲಯಕ್ಕೂ ಒಂದು ಕಟ್ಟುಪಾಡು (ಬೈಲಾ)ವನ್ನು ರಚಿಸಿದ್ದು ಸುತ್ತಮುತ್ತಲಿನ ಗ್ರಾಮಸ್ಥರ ಹಾಗೂ ಕೊಡವ ಸಮುದಾಯದ ಭಕ್ತಾಧಿಗಳ ಒಪ್ಪಿಗೆ ಕೂಡ ಇದೆ. ಕೊಡವರು ಕೂಡ ದೇವಾಲಯದ ವಾರ್ಷಿಕೋತ್ಸವಕ್ಕೆ ತನು, ಮನ, ಧನ ಸಹಾಯ ಮಾಡಿದ್ದಾರೆ ಮತ್ತು ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ.
ಕೊಡವ ಸಮುದಾಯದ ಜನರನ್ನು ದೇವಾಲಯದೊಳಗೆ ಬರಬೇಡಿ ಎಂದು ಹೇಳಲಿಲ್ಲ, ಬದಲಿಗೆ ದೇವಾಲಯದ ಕಟ್ಟುಪಾಡುಗಳನ್ನು (ಬೈಲಾ) ವನ್ನು ಪಾಲಿಸಿ ಒಳಗೆ ಬನ್ನಿ ಎಂದು ಹೇಳಲಾಗಿತ್ತು. ಈ ದೇವಾಲಯವು ಒಂದು ಪುಣ್ಯಕ್ಷೇತ್ರವಾಗಿದ್ದು, ಇಲ್ಲಿ ಎಲ್ಲರೂ ಒಂದೇ ಎನ್ನುವ ನಿರ್ಣಯವನ್ನು ದೇವಾಲಯದ ಸಮಿತಿ ತೆಗೆದುಕೊಂಡಿದೆ. ಈ ನಿರ್ಣಯವನ್ನು ದಿಕ್ಕರಿಸಿದ್ದೆ ಈ ಸಂಘರ್ಷಕ್ಕೆ ಮುಖ್ಯ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು. ಯಾವುದೇ ವರ್ಗೀಯ ಆಚರಣೆಗಳಿಗೆ ಅಥವಾ ಒಂದು ವರ್ಗಕ್ಕೆ ಪ್ರಾಧಾನ್ಯತೆ ನೀಡದಂತೆ ಮಹಾಮೃತ್ಯುಂಜಯ ದೇವಾಲಯ ಸಮಿತಿಯು ರೂಪಿಸಿರುವ ಬೈಲಾಕ್ಕೆ ಕಟ್ಟೆಮಾಡು ಪರಂಬು ಪೈಸಾರಿ ಗ್ರಾಮಸ್ಥರ ಒಪ್ಪಿಗೆ ಇದೆ. ದೇವಾಲಯದಲ್ಲಿ ಯಾರೂ ಮೇಲು ಅಲ್ಲ, ಯಾರೂ ಕೀಳು ಅಲ್ಲ, ಎಲ್ಲರೂ ಸಮಾನರೆ ಎಂದು ಬಿ.ಕೆ.ಉಮೇಶ್ ತಿಳಿಸಿದರು.
::: ಹಬ್ಬದ ಅಡುಗೆ ಹಳಸಿದೆ :::
ಜಾತ್ರೋತ್ಸವದ ಅಂಗವಾಗಿ ಡಿ.27 ರಂದು ಸುಮಾರು ಮೂರು ಸಾವಿರ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ ದೇವಾಲಯದಲ್ಲಿ ಅಶಾಂತಿ ಮೂಡಿದ ಕಾರಣ ಬಹುತೇಕರು ಬೇಸರಪಟ್ಟುಕೊಂಡು ಊಟ ಮಾಡದೆ ಮರಳಿದ್ದಾರೆ. ರಾತ್ರಿ ಹಗಲೆನ್ನದೆ ಸ್ವಯಂ ಸೇವಕರಾಗಿ ಜಾತ್ರೋತ್ಸವದ ಯಶಸ್ಸಿಗಾಗಿ ದುಡಿದ ಅನೇಕರು ಘಟನೆಯಿಂದ ಬೇಸರಗೊಂಡು ಕಣ್ಣೀರು ಹಾಕಿದ್ದಾರೆ. ನಿಷೇಧಾಜ್ಞೆ ಜಾರಿಯಿಂದಾಗಿ ದೇವಾಲಯದಲ್ಲಿ ಹಬ್ಬದ ಅಡುಗೆ ಹಳಸಿ ಹೋಗಿದೆ. ಪಾತ್ರೆ ತೊಳೆಯುವವರಿಲ್ಲದೆ ಅಶುಚಿತ್ವದ ವಾತಾವರಣವಿದೆ. ಈ ಬೆಳವಣಿಗೆ ಅತ್ಯಂತ ವಿಷಾದಕರವೆಂದು ಬೇಸರ ವ್ಯಕ್ತಪಡಿಸಿದರು. ಸುದ್ದಿಗೋಷ್ಟಿಯಲ್ಲಿದ್ದ ಗಣಪತಿ ಸೇವಾ ಸಮಿತಿಯ ಉಪಾಧ್ಯಕ್ಷ ಪಿ.ತಿಮ್ಮಪ್ಪ, ಎಂ.ಎಸ್.ವೆ0ಕಟೇಶ್, ಎಂ.ಪಿ.ಲೋಕೇಶ್, ಬಿ.ಎ.ಜಯರಾಂ ಹಾಗೂ ಜೇನುಕುರುಬರ ಮುತ್ತ ಅವರುಗಳು ಮಹಾಮೃತ್ಯುಂಜಯ ದೇವಾಲಯ ಸಮಿತಿಯ ಪರ ಮಾತನಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.