ಮಡಿಕೇರಿ NEWS DESK ಡಿ.31 : ಹೊಸ ವರ್ಷಾಚರಣೆಯ ಹಿನ್ನೆಲೆ ಹಸಿರ ಪರಿಸರದ ಕೊಡಗಿನಲ್ಲಿ ಪ್ರವಾಸಿಗರ ದಂಡು ಕಂಡು ಬಂತು. ಮಂಜಿನ ನಗರಿ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ವರ್ಷದ ಕೊನೆಯ ದಿನದ ಸೂರ್ಯಾಸ್ತದ ಮನಮೋಹಕ ದೃಶ್ಯವನ್ನು ಸಾವಿರಾರು ಪ್ರವಾಸಿಗರು ಕಣ್ತುಂಬಿಕೊ0ಡರು. ಸೂರ್ಯಾಸ್ತವನ್ನು ವೀಕ್ಷಿಸಿ ಸಂಭ್ರಮಿಸಿದ ಪ್ರಕೃತಿ ಪ್ರಿಯರು ತಮ್ಮ ಮೊಬೈಲ್‌ಗಳಲ್ಲಿ ಸುಂದರ ದೃಶ್ಯವನ್ನು ಸೆರೆ ಹಿಡಿದರು. ನಗರದಂಚಿನ ಅಬ್ಬಿಫಾಲ್ಸ್ ಸೇರಿದಂತೆ ಜಿಲ್ಲೆಯ ವಿವಿಧ ಪ್ರವಾಸಿತಾಣಗಳಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದರು. ಜಿಲ್ಲೆಯ ಹೋಂ ಸ್ಟೇ, ರೆಸಾರ್ಟ್ಗಳು ಭರ್ತಿಯಾಗಿವೆ. ವಾಹನದಟ್ಟಣೆಯಿಂದ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಯಿತು.