ಮಡಿಕೇರಿ NEWS DESK ಡಿ.31 : ಹುತಾತ್ಮ ದಿವಿನ್ ಅವರ ಪಾರ್ಥಿವ ಶರೀರ ಇಂದು ರಾತ್ರಿ 11.30 ಗಂಟೆ ಸುಮಾರಿಗೆ ಕುಶಾಲನಗರ ತಾಲ್ಲೂಕಿನ ಸರಕಾರಿ ಆಸ್ಪತ್ರೆಗೆ ತಲುಪುತ್ತದೆ. ಈ ರಾತ್ರಿ ಕುಶಾಲನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ನಾಳೆ ಬೆಳಗ್ಗೆ 8 ಗಂಟೆಯಿಂದ 10 ಗಂಟೆವರೆಗೆ ಕುಶಾಲನಗರದ ಜಿ ಎಂ ಪಿ ಶಾಲಾ ಮೈದಾನದಲ್ಲಿ ಹುತಾತ್ಮ ದಿವಿನ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಆ ಬಳಿಕ ಸ್ವಗ್ರಾಮ ಆಲೂರು ಸಿದ್ದಾಪುರಕ್ಕೆ ಕೊಂಡೊಯ್ದು ಅಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ತರುವಾಯ ವಿಧಿ ವಿಧಾನಗಳ ಬಳಿಕ ಮಧ್ಯಾಹ್ನ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ. ಹುತಾತ್ಮ ದಿವಿನ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತ ಕೂಡ ಎಲ್ಲಾ ವ್ಯವಸ್ಥೆಗೆ ಕೈಜೋಡಿಸಿದ್ದು, ಸಾರ್ವಜನಿಕರು ವೀರಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮಾಡಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.