ವಿರಾಜಪೇಟೆ ಜ.1 NEWS DESK : ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ಅವರಿಗೆ ಯು.ಜಿ.ಸಿ ನಿಯಮದ ಪ್ರಕಾರ ಅಸೋಸಿಯೇಟ್ ಪ್ರೊಫೆಸರ್ ನಿಂದ ಪ್ರೊಫೆಸರ್ ಆಗಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ವೃತ್ತಿಪದೋನ್ನತಿ ನೀಡಿ ಆದೇಶಿಸಿದ್ದಾರೆ. ಇವರು ಭಾಗಮಂಡಲ ನಾಡು ತಾವೂರು ಗ್ರಾಮದ ಕೂಡಕಂಡಿ ಚಂದ್ರಹಾಸ ಮತ್ತು ಹರಿಣಾಕ್ಷಿ ದಂಪತಿಯ ಪುತ್ರ. ಪ್ರಸ್ತುತ ಮಡಿಕೇರಿ ನಗರದ ಕಾವೇರಿ ಲೇಔಟ್ ನಲ್ಲಿ ನೆಲೆಸಿದ್ದಾರೆ.