ಮಡಿಕೇರಿ NEWS DESK ಜ.1 : ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಪಳಂಗೋಟು ದಿವಿನ್ ಅವರಿಗೆ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮತ್ತು ಕುಶಾಲನಗರ ಧರ್ಮಕೇಂದ್ರದ ವತಿಯಿಂದ ಗೌರವ ಅರ್ಪಿಸಲಾಯಿತು. ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ, ಧರ್ಮಕೇಂದ್ರದ ಧರ್ಮಗುರು ಮಾರ್ಟಿನ್ ಮತ್ತಿತರ ಪ್ರಮುಖರು ದಿವಿನ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು.