ಸಕಲೇಶಪುರ NEWS DESK ಜ.2 : ಶಾರ್ಟ್ ಸರ್ಕ್ಯೂಟ್‌ನಿಂದ ಬಸ್ ವೊಂದು ಅಗ್ನಿಗಾಹುತಿಯಾದ ಘಟನೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯ ಎತ್ತಿನಹಳ್ಳ ಬಳಿ ನಡೆದಿದೆ. ಇಂದು ಬೆಳಿಗ್ಗೆ ಸುಮಾರು 5 ಗಂಟೆ ವೇಳೆಯಲ್ಲಿ ಬೆಂಗಳೂರಿನಿoದ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಸ್ಲೀಪಿಂಗ್ ಕೋಚ್ ಎಸಿ ಬಸ್ ನ ಇಂಜಿನ್‌ನಲ್ಲಿ ಬೆಂಕಿ ಕಾಣಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಬಸ್ ನ ಚಾಲಕ ಯೋಗೀಶ್ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನೋಡುನೋಡುತ್ತಿದ್ದಂತೆಯೇ ಬಸ್ ಹೊತ್ತಿ ಉರಿದಿದೆ. ಸುಮಾರು ಮೂವತ್ತು ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಿದರು.