ಮಡಿಕೇರಿ ಜ.2 NEWS DESK : ವಿರಾಜಪೇಟೆ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟ ನಾಪೋಕ್ಲು ಹೋಬಳಿಯ ಕಕ್ಕಬ್ಬೆ-ಚೆಯ್ಯಂಡಾಣೆ ರಸ್ತೆಯ ದುರಸ್ತಿ ಕಾಮಗಾರಿಯು ಪ್ರಗತಿಯಲ್ಲಿದೆ. ಮಳೆಯಿಂದಾಗಿ ಈ ಭಾಗದ ರಸ್ತೆ ತೀವ್ರ ಹಾನಿಯಾಗಿತ್ತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ ಹಾಗೂ ಅನುದಾನದಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಶಾಸಕರ ಕಾಳಜಿಗೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.