ಮಡಿಕೇರಿ ಜ.2 NEWS DESK : ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಡಿ.31 ರಂದು ನಿವೃತ್ತಿ ಹೊಂದಿದ ಎಎಸ್ಐ ಕೆ.ಎಂ.ತಮ್ಮಯ್ಯ ಹಾಗೂ ಪೊಲೀಸ್ ನಿರೀಕ್ಷಕ ಉಮೇಶ್ ಉಪ್ಪಳಿಕೆ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.