ಮಡಿಕೇರಿ ಜ.2 NEWS DESK : ಕುಶಾಲನಗರದಿಂದ ಸೋಮವಾರಪೇಟೆಗೆ ಹಾದು ಹೋಗುವ 33ಕೆವಿ ಮಾರ್ಗದ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಜ.3 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಯಡವನಾಡು, ಸೋಮವಾರಪೇಟೆ, ಶಾಂತಳ್ಳಿ, ಐಗೂರು, ದೊಡ್ಡಮಳ್ತೆ, ಅಬ್ಬೂರುಕಟ್ಟೆ, ಮಸಗೋಡು, ಕರ್ಕಳ್ಳಿ, ಹಾನಗಲ್ಲು, ಬೆಳೂರು, ಯಡವಾರೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.