Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಾಕೃತಿಕ ವಿಕೋಪ ನಿರ್ವಹಣೆ : ಅಗತ್ಯ ಮುನ್ನೆಚ್ಚರಿಕೆ ಕುರಿತು ಮಾಹಿತಿ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಾಕೃತಿಕ ವಿಕೋಪ ನಿರ್ವಹಣೆ : ಅಗತ್ಯ ಮುನ್ನೆಚ್ಚರಿಕೆ ಕುರಿತು ಮಾಹಿತಿ ಕಾರ್ಯಾಗಾರ*

ಜನವರಿ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.2 NEWS DESK : ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕಾರ್ಯಾಗಾರವು ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕರಾದ ಡಾ. ಜೆ.ಆರ್.ಪರಮೇಶ್ ಮಾಹಿತಿ ನೀಡಿ ಹವಾಮಾನ ಇಲಾಖೆಯು ಕಾಲ ಕಾಲಕ್ಕೆ ಹೊರಡಿಸುವ ಮುನ್ಸೂಚನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿದ್ದಲ್ಲಿ ಪ್ರಾಕೃತಿಕ ವಿಕೋಪವನ್ನು ತಡೆಯಬಹುದಾಗಿದೆ ಎಂದರು. ಸ್ಥಳೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನಿಯೋಜನೆ, ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಜೊತೆ ಸಮನ್ವಯತೆ ಸಾಧಿಸುವುದು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿ, ಮಾಹಿತಿ ಹಂಚಿಕೊಳ್ಳುವುದು, ಹಾಗೆಯೇ ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚು ಹೆಚ್ಚು ಮಾಹಿತಿ ವಿನಿಮಯ ಮಾಡಿಕೊಳ್ಳುವುದು. ಹೀಗೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ಕಂದಾಯ, ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ದಳ ಹಾಗೆಯೇ ಸೆಸ್ಕ್, ಅರಣ್ಯ, ಪಂಚಾಯತ್ ರಾಜ್, ಲೋಕೋಪಯೋಗಿ, ಪೌರಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹೀಗೆ ಪ್ರತಿಯೊಂದು ಇಲಾಖೆಯು ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ವಿಕೋಪವನ್ನು ತಡೆದು ಹಲವು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬಹುದು ಎಂದು ಡಾ.ಪರಮೇಶ್ ಹೇಳಿದರು. ಪ್ರಕೃತಿ ವಿಕೋಪ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆಯಾಗಿ ಮಾಹಿತಿ ನೀಡುವುದು, ಅರಿವು ಕಾರ್ಯಕ್ರಮ, ತೆರವುಗೊಳಿಸುವಿಕೆ ಮತ್ತಿತರ ಕ್ರಮ ಕೈಗೊಳ್ಳುವುದು, ಸೆಸ್ಕ್ ವಿಭಾಗದ ಮೂಲಕ ವಿದ್ಯುತ್ ಉಪಕರಣಗಳನ್ನು ವಿಕೋಪದ ಸಂದರ್ಭದಲ್ಲಿ ಸೂಕ್ತವಾಗಿ ನಿರ್ವಹಿಸಲು ಸೂಚಿಸಿ ಅಗತ್ಯ ಕ್ರಮಕೈಗೊಳ್ಳುವುದು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರ ಗುರುತಿಸುವುದು, ವಿಕೋಪ ಪೀಡಿತ ಪ್ರದೇಶಗಳಲ್ಲಿ ಲಭ್ಯವಿರಬೇಕಾದ ಔಷಧ, ಚಿಕಿತ್ಸಾ ಉಪಕರಣಗಳ ಕುರಿತಂತೆ ಅಗತ್ಯ ಕ್ರಮ ವಹಿಸುವುದು, ಅಲ್ಲದೇ ಮಳೆಗಾಲದಲ್ಲಿನ ಸಮಸ್ಯೆಯಾದ ಸಾಂಕ್ರಾಮಿಕ ರೋಗ ನಿರ್ವಹಣೆಗೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಲಭ್ಯವಿರುವಂತೆ ಆರೋಗ್ಯ ಇಲಾಖೆಯಿಂದ ಕ್ರಮವಹಿಸುವುದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆಯನ್ನು ನಡೆಸುವುದು, ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಭೂವಿಜ್ಞಾನಿಗಳು ಭೂಕುಸಿತ ಪೀಡಿತ ಪ್ರದೇಶಗಳ ಬಗ್ಗೆ ಅಧ್ಯಯನ ನಡೆಸುವುದು, ಹೀಗೆ ಹಲವು ಮುನ್ನೆಚ್ಚರ ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ಮಾಹಿತಿ ನೀಡಿದರು. ಜಿಲ್ಲಾ ವಿಕೋಪ ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ ಅವರು ಮಾಹಿತಿ ನೀಡಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಹಲವು ಸವಾಲುಗಳನ್ನು ಎದುರಿಸಬೇಕಿದೆ. ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದರು. ಜಿಲ್ಲಾ ಆಡಳಿತ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಬಿ.ಮಾದಪ್ಪ, ವಿವಿಧ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.