ಮಡಿಕೇರಿ NEWS DESK ಜ.2 : ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತುಂಜಯ ದೇವಾಲಯದಲ್ಲಿ ವಸ್ತç ಸಂಹಿತೆ ವಿಚಾರದಲ್ಲಿ ಉಂಟಾದ ಗೊಂದಲದ ಬಳಿಕ ಎರಡು ಸಮುದಾಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅವಹೇಳನ ಮಾಡುತ್ತಿರುವುದು ಕಂಡು ಬಂದಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಪಿ ಯಾವುದೇ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಪ್ರತ್ಯೇಕ ದೂರುಗಳನ್ನು ಆಧರಿಸಿ ಅನುದೀಪು ಹಾಗೂ ಅಯ್ಯಪ್ಪ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದರು. ದೇವಾಲಯದ ವಿಚಾರದ ಕುರಿತು ಎರಡೂ ಸಮುದಾಯಗಳ ಮುಖಂಡರ ಜೊತೆಯಲ್ಲಿ ಶಾಂತಿಸಭೆ ನಡೆಸಿ ಪರಸ್ಪರ ಸಮಸ್ಯೆ ಪರಿಹರಿಸಿಕೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ. ಎರಡೂ ಸಮುದಾಯದ ಮುಖಂಡರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಮಾತ್ರವಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದು, ಪರಶೀಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಯಾರೂ ಕೂಡ ಇಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಆಯಾ ಸಮುದಾಯದ ಪ್ರಮುಖರು ಹಾಗೂ ಹಿರಿಯರು ಕರೆ ನೀಡಿಬೇಕೆಂದು ಎಸ್.ಪಿ. ರಾಮರಾಜನ್ ಮನವಿ ಮಾಡಿದರು. ::: ನಿಷೇಧಾಜ್ಞೆ :::
ಕಟ್ಟೆಮಾಡು ಶ್ರೀ ಮಹಾ ಮೃತುಂಜಯ ದೇವಾಲಯದ 5 ಕಿ.ಮೀ ವ್ಯಾಪ್ತಿಯಲ್ಲಿ ಈಗಾಗಲೇ ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಈ ಅವಧಿಯಲ್ಲಿ ಪ್ರತಿಭಟನೆ, ರ‍್ಯಾಲಿ, ಸಭೆಗಳನ್ನು ನಡೆಸಲು ಅವಕಾಶವಿಲ್ಲ ಎಂದರು.
Breaking News
- *ಕುಶಾಲನಗರ ತಾಲ್ಲೂಕು ಸೌಂದರ್ಯ ವರ್ಧಕ ಸಂಘದಿಂದ ತರಬೇತಿ ಕಾರ್ಯಾಗಾರ*
- *ಬಾಕ್ಸಿಂಗ್ ಸ್ಪರ್ಧೆಯಲ್ಲಿ ಕೊಡಗಿನ ಬಳಪಂಡ ಪಂಚಮಿಗೆ ಬೆಳ್ಳಿ ಪದಕ*
- *ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಮಿತಿ ಮೀರಿದ ವನ್ಯಜೀವಿ ಉಪಟಳ : ಅನಾಹುತ ಸಂಭವಿಸಿದರೆ ಅರಣ್ಯ ಅಧಿಕಾರಿಗಳೇ ನೇರ ಹೊಣೆ : ಬಿಜೆಪಿ ಎಚ್ಚರಿಕೆ*
- *ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಜ.23 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
- *ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಪ್ರದಾನ*
- *ಕೊಡಗು ಔಷಧಿ ವ್ಯಾಪಾರಸ್ಥರ ಸಂಘದಿಂದ ಜ.24 ರಂದು ರಕ್ತ ಸಂಗ್ರಹಣೆ ಶಿಬಿರ*
- *ಚಿತ್ರಕಲೆ ಸ್ಪರ್ಧೆಯಲ್ಲಿ ಎ.ಎಂ.ಡಿಯಾ ಪ್ರಥಮ*
- *ದಲೈಲಾಮಾ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ ದಂಪತಿ*
- *ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ ಮನೆಗೆ ಲಗ್ಗೆ ಇಟ್ಟ ಕಾಡಾನೆ*
- *ಕಾಡಾನೆ ದಾಳಿಯಿಂದ ಕೃಷಿಕ ಸಾವು*