ಮಡಿಕೇರಿ ಜ.3 NEWS DESK : ವೃತ್ತಿಪರ ಶಿಕ್ಷಣ ಮೊದಲನೇ ವರ್ಷದಲ್ಲಿ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿಂದ ನೀಡುವ 2024-25 ನೇ ಸಾಲಿನ ಪ್ರಧಾನಮಂತ್ರಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.3 ರವರೆಗೆ ಕೇಂದ್ರೀಯ ಸೈನಿಕ ಮಂಡಳಿಯು ಮತ್ತೂಮ್ಮೆ ಅವಕಾಶ ಕಲ್ಪಿಸಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು (online.ksb.gov.in) ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.