ಮಡಿಕೇರಿ ಜ.3 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ. ಅರ್ಹತೆಗಳು :: ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿರುವ ವಾರ್ಷಿಕ ಆದಾಯ ಮಿತಿ:- ಪ್ರವರ್ಗ-1 ರೂ. 4.50 ಲಕ್ಷ, ಪ್ರವರ್ಗ-2ಎ, 3ಎ, 3ಬಿ ರೂ. 3.50 ಲಕ್ಷ ಮಿತಿಯಲ್ಲಿರಬೇಕು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ವಿಶ್ವವಿದ್ಯಾಲಯ/ ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶನದಡಿ ಪಿ.ಹೆಚ್.ಡಿ. ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು. ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಆಫ್-ಲೈನ್ ಅರ್ಜಿ ಪ್ರತಿ ಹಾಗೂ ಮೂಲ ದಾಖಲಾತಿಗಳನ್ನು ಜನವರಿ 25 ರೊಳಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೇವರಾಜ ಅರಸು ಭವನ, ಮಡಿಕೇರಿ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳು ಇಲಾಖಾ ವೆಬ್ಸೈಟ್ https://www.bcwd.karnataka.gov.in ನಲ್ಲಿ ಲಭ್ಯ ಇರುತ್ತದೆ. ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಹಾಯವಾಣಿ ಸಂಖ್ಯೆ: 8050770004 ಅಥವಾ ಹೆಚ್ಚಿನ ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.