*ಮದೆ-ಬೆಟ್ಟತ್ತೂರು-ಚೇರಂಬಾಣೆ ರಸ್ತೆ ದುರಸ್ತಿ ಕಾರ್ಯ ಆರಂಭ*
1 Min Read
ಮಡಿಕೇರಿ ಜ.3 NEWS DESK : ಮದೆ-ಬೆಟ್ಟತ್ತೂರು-ಚೇರಂಬಾಣೆ ರಸ್ತೆ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಆದೇಶದ ಮೇರೆಗೆ ಈ ಕಾಮಗಾರಿ ನಡೆಸಲಾಗುತ್ತಿದ್ದು, ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಕಾಮಗಾರಿಯನ್ನು ಮುಗಿಸಿಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.