Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಡಿಯೋ ಗ್ಯಾಲರಿ

ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜನವರಿ 3, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಜ.3 NEWS DESK : ನರರೋಗ ಚಿಕಿತ್ಸೆಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಸಾಧಿಸುವ ಮೂಲಕ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ “ಸುವರ್ಣ ಮಹೋತ್ಸವ’’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಮ್ಮ ದೇಶದ ಹೆಮ್ಮೆಯ ಮಾನಸಿಕ ಆರೋಗ್ಯ ಮತ್ತು ನರರೋಗಗಳ ರಾಷ್ಟ್ರೀಯ ಸಂಸ್ಥೆ ನಿಮ್ಹಾನ್ಸ್ ನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿ. ನಿಮ್ಹಾನ್ಸ್ ಕಳೆದ ಐದು ದಶಕಗಳ ಅವಧಿಯಲ್ಲಿ ದೇಶದ ಮಾನಸಿಕ ಆರೋಗ್ಯ ಹಾಗೂ ನರರೋಗಗಳ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡುತ್ತಾ ಬಂದಿದ್ದು, ದೇಶದ ಪ್ರಮುಖ ಸಂಸ್ಥೆಯಾಗಿ ತನ್ನ ಛಾಪು ಮೂಡಿಸಿದೆ. ಮೈಸೂರು ಸರ್ಕಾರದ ಮಾನಸಿಕ ಆಸ್ಪತ್ರೆ ಮತ್ತು ಭಾರತೀಯ ಮಾನಸಿಕ ಆರೋಗ್ಯ ಸಂಸ್ಥೆಯನ್ನು ಒಗ್ಗೂಡಿಸುವ ಮೂಲಕ ಪ್ರಾರಂಭವಾದ ನಿಮ್ಹಾನ್ಸ್, ಮಾನಸಿಕ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೀಸಲಾದ ಭಾರತದ ಪ್ರಪ್ರಥಮ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿದೆ ಎಂದು ಹೇಳಿದರು. ರಾಷ್ಟ್ರೀಯ ಮಹತ್ವವನ್ನು ಹೊಂದಿರುವ ಈ ಸಂಸ್ಥೆಯು ತನ್ನ ಐದು ದಶಕದ ಪಯಣದಲ್ಲಿ ಆರೈಕೆ, ಸಂಶೋಧನೆ ಮತ್ತು ಶಿಕ್ಷಣ ವಲಯದಲ್ಲಿ ವಿಶ್ವದ ಗಮನ ಸೆಳೆದಿದೆ. ಮಾನಸಿಕ ಆರೋಗ್ಯ ಕುರಿತಾದ ನೀತಿ ನಿರೂಪಣೆಯಲ್ಲಿ ನಿಮ್ಹಾನ್ಸ್ ಕೊಡುಗೆಯನ್ನು ಜಾಗತಿಕವಾಗಿ ಗುರುತಿಸಲಾಗಿರುವುದು ಹೆಮ್ಮೆಯ ಸಂಗತಿ. ಮಾನಸಿಕ ಆರೋಗ್ಯದ ಆರೈಕೆ ಜೊತೆಗೆ ರೋಗದ ಕುರಿತಾಗಿ ಸಾಮಾನ್ಯವಾಗಿ ಅಂಟಿಕೊಳ್ಳುವ ಸಮಾಜದ ನಕರಾತ್ಮಕ ದೃಷ್ಟಿಕೋನವನ್ನು ಬಹುತೇಕ ನಿವಾರಿಸುವಲ್ಲಿ ನಿಮ್ಹಾನ್ಸ್ ಯಶಸ್ವಿಯಾಗಿದೆ. ಪಾರ್ಶ್ವವಾಯು, ತೀವ್ರತರ ಮೆದುಳು ಕಾಯಿಲೆಗಳು ಮತ್ತು ನರರೋಗ ಚಿಕಿತ್ಸೆಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಸಾಧಿಸುವ ಮೂಲಕ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯವಾಗಿದೆ ಎಂದು ಎಂದರು. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಶ್ರೇಷ್ಠತೆಯನ್ನು ಸಾಧಿಸಿರುವ ರಾಷ್ಟ್ರೀಯ ಮಹತ್ವದ ಈ ಸಂಸ್ಥೆ ಕರ್ನಾಟಕದಲ್ಲಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆಯ ವಿಷಯ. ರಾಜ್ಯದಾದ್ಯಂತ ಮಾನಸಿಕ ಆರೋಗ್ಯ ಸೇವೆಯನ್ನು ಕಲ್ಪಿಸಲು ಸರ್ಕಾರ ನಿಮ್ಹಾನ್ಸ್ನೊಂದಿಗೆ ಜೊತೆಗೂಡಿ ಕಾರ್ಯನಿರ್ವಹಿಸುತ್ತಿದೆ. ನಿಮ್ಹಾನ್ಸ್ನೊಂದಿಗಿನ ಜಂಟಿ ಸಹಭಾಗಿತ್ವದ ಮೂಲಕ ರಾಜ್ಯದ ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯ ಸೇವೆಯನ್ನು ಖಾತ್ರಿಪಡಿಸಲು ನಮಗೆ ಸಾಧ್ಯವಾಗಿದೆ. ನಮ್ಮ ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ ಒತ್ತು ನೀಡಿದೆ. ಟೆಲಿ ಮಾನಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ಮಾನಸಿಕ ಆರೋಗ್ಯದ ಬೆಂಬಲ ಅಗತ್ಯವಿರುವ ಸುಮಾರು 17 ಲಕ್ಷ ಜನರು ಇದರ ಪ್ರಯೋಜನ ಪಡೆದಿದ್ದಾರೆ. ನಿಮ್ಹಾನ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್ ಗಳಲ್ಲಿ ಈ ಘಟಕಗಳ ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯ ಆರೋಗ್ಯ ಸೇವೆಯನ್ನು ಕಲ್ಪಿಸುತ್ತಿದೆ. ರಾಜ್ಯ ಸರ್ಕಾರ ನೀತಿ ಆಯೋಗ, ನಿಮ್ಹಾನ್ಸ್ ಸಹಯೋಗದಲ್ಲಿ ಆರಂಭಿಸಿರುವ ಕರ್ನಾಟಕ ಬ್ರೈನ್ ಹೆಲ್ತ್ ಇನೀಷಿಯೇಟಿವ್, ನರರೋಗ ಆರೈಕೆಯಲ್ಲಿ ತಜ್ಞರ ಸೇವೆಯನ್ನು ಜಿಲ್ಲಾಮಟ್ಟದಲ್ಲಿಯೂ ಲಭ್ಯವಾಗಿಸಿದೆ. ತೀವ್ರತರ ಪಾರ್ಶ್ವವಾಯು ಮತ್ತು ನರರೋಗ ಆಘಾತ ಆರೈಕೆಯಲ್ಲಿ ತರಬೇತಿ ಮತ್ತು ನಾವೀನ್ಯತಾ ಮಾದರಿಗಳನ್ನು ಈ ಯೋಜನೆ ಸಾಧ್ಯವಾಗಿಸಿದೆ ಎಂದರು. ನಗರ ಮತ್ತು ಗ್ರಾಮೀಣ ಜನಸಂಖ್ಯೆಗೆ ಸೇವಾ ಲಭ್ಯತೆಯಲ್ಲಿ ಏಕರೂಪತೆ ತರಲು ರಾಜ್ಯ ಸರ್ಕಾರವು ಮಾನಸಿಕ ಆರೋಗ್ಯವನ್ನು ಪ್ರಾಥಮಿಕ ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಸಂಯೋಜಿಸಿದೆ. ನಿಮ್ಹಾನ್ಸ್ ಸಂಸ್ಥೆಯ ಕಾರ್ಯನಿರ್ವಹಣೆಗಾಗಿ ಪ್ರತಿವರ್ಷ 137 ಕೋಟಿ ರೂ.ಗಳನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರ ತನ್ನ ಬದ್ಧತೆಯನ್ನು ನಿರೂಪಿಸಿದೆ. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಈ ಸಾರ್ವಜನಿಕ- ಖಾಸಗಿ ಸಹಭಾಗಿತ್ವ ಮೈಲಿಗಲ್ಲು ಸಾಧನೆಗಳನ್ನು ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಲದಮರ ಫೌಂಡೇಶನ್ ಸಹಯೋಗದೊಂದಿಗೆ ಬೆಂಗಳೂರಿನ ಸರ್ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ 25 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸೆ ಹಾಗೂ ರಿಕವರಿ ಕೇಂದ್ರವು ಮಾನಸಿಕ ಕಾಯಿಲೆಯಿಂದ ಬಳಲುವ ನಿರ್ಗತಿಕರಿಗೆ ಪುನವರ್ಸತಿಯನ್ನು ಕಲ್ಪಿಸಿದೆ. ಜಿಲ್ಲಾ ಉಪಕೇಂದ್ರ ಆಸ್ಪತ್ರೆಗಳಲ್ಲಿ ಮನೋಚೈತನ್ಯ ಮಾನಸಿಕ ಆರೋಗ್ಯ ಚಿಕಿತ್ಸಾ ಕಾರ್ಯಕ್ರಮಗಳ ಮೂಲಕ 146 ತಾಲ್ಲೂಕುಗಳ ಐದು ಲಕ್ಷ ಜನರಿಗೆ ಉಪಯೋಗವಾಗಿದೆ. ಅಲ್ಲದೇ, ಆರ್.ಸಿ.ಎಚ್, ಆರ್‌ಬಿಎಸ್‌ಕೆ ಮತ್ತು ಆರ್‌ಕೆಎಸ್‌ಕೆ ಸಹಭಾಗಿತ್ವದೊಂದಿಗೆ ತಾಯಿ, ಮಗು ಮತ್ತು ಕಿಶೋರ ಮಾನಸಿಕ ಆರೋಗ್ಯ ಸೇವೆಗಳ ಪೂರೈಸಲು ಕ್ರಮವಹಿಸಲಾಗುತ್ತಿದೆ ಎಂದರು. ಮಾನಸಿಕ ಆರೋಗ್ಯದೆಡೆಗೆ ಕರ್ನಾಟಕದ ನಡೆಯುವ ಆರೋಗ್ಯ ಸೇವೆಯ ಲಭ್ಯತೆ, ನಾವಿನ್ಯತೆ ಮತ್ತು ಸಹಾನುಭೂತಿಯನ್ನೊಳಗೊಂಡ ಸಮಗ್ರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಮಾನಸಿಕ ಆರೋಗ್ಯದ ಸವಾಲುಗಳನ್ನು ಸಮಗ್ರವಾಗಿ ಎದುರಿಸುವ ನಮ್ಮ ಪ್ರಯತ್ನದಲ್ಲಿ ನಮ್ಮನ್ನು ಮುಂಚೂಣಿಯಲ್ಲಿರಿಸಿದೆ. ಈ ಪ್ರಯತ್ನ ಒಳಗೊಳ್ಳುವ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ. ಈ ಮೈಲಿಗಲ್ಲು ಸಾಧನೆಗೆ ಕಾರಣರಾಗಿರುವ ನಿಮ್ಹಾನ್ಸ್ ನ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೆ ನನ್ನ ಅಭಿನಂದನೆಗಳು. ನಿಮ್ಮ ಸಮರ್ಪಣೆಯ ಸೇವೆ ಮಾನಸಿಕ ಆರೋಗ್ಯ ವಿಶ್ವದೆಲ್ಲೆಡೆ ಲಭಿಸಲು ಹಾಗೂ ಪ್ರತಿಯೊಬ್ಬರ ಆರೋಗ್ಯಕರ ಜೀವನದ ಅವಕಾಶ ಕಲ್ಪಿಸುವ ಭವಿಷ್ಯ ನಿರ್ಮಾಣಕ್ಕೆ ಪ್ರೇರಣೆ ನೀಡಿದೆ. ನಿಮ್ಹಾನ್ಸ್ ನ ಮೂಲಸೌಕರ್ಯ ಅಭಿವೃದ್ಧಿ, ಸಂಶೋಧನೆ ಹಾಗೂ ತರಬೇತಿ ಕಾರ್ಯಕ್ರಮಗಳಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದೆ. ನಾವು ಒಟ್ಟಾಗಿ ಶ್ರಮಿಸಿ, ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡುವ ಆರೋಗ್ಯ ವ್ಯವಸ್ಥೆಯನ್ನು ಕಟ್ಟುವ ಮೂಲಕ ಸುಭದ್ರ ರಾಷ್ಟ್ರವನ್ನು ನಿರ್ಮಿಸೋಣ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.