ರು NEWS DESK ಜ.3 : ಬಸ್ ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಿ ಇಂದು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಜೆಪಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಹೂವು ನೀಡುವುದರ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಕ್ಷದ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಎನ್.ರವಿಕುಮಾರ್, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.