Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕರಿಬಂಡೆಗಳ ಮೇಲೆ ಧುಮ್ಮಿಕ್ಕಿ ಹರಿಯುತ್ತಿರುವ ಉಂಚಳ್ಳಿ ಜಲಪಾತದ*
ಪ್ರವಾಸಿತಾಣ

*ಕರಿಬಂಡೆಗಳ ಮೇಲೆ ಧುಮ್ಮಿಕ್ಕಿ ಹರಿಯುತ್ತಿರುವ ಉಂಚಳ್ಳಿ ಜಲಪಾತದ*

January 3, 20251 Min Read
Share
Facebook Twitter LinkedIn Pinterest WhatsApp Email

ಉಂಚಳ್ಳಿ ಜಲಪಾತ ಅಥವಾ ಲುಷಿಂಗ್ಟನ್ ಜಲಪಾತ ಅಘನನಾಶಿನಿ ನದಿಯಿಂದ ಸೃಷ್ಟಿಯಾಗುವ ಜಲಪಾತ. ಇದರ ಎತ್ತರ ಸುಮಾರು 116ಮೀಟರ್. ಈ ಜಲಪಾತವು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಸಿರ್ಸಿಯಿಂದ 30 ಕಿಮಿ ದೂರದಲ್ಲಿದೆ. 1845ರಲ್ಲಿ ಈ ಜಲಪಾತವನ್ನು ಪತ್ತೆಹಚ್ಚಿದ ಬ್ರಿಟಿಷ್ ಅಧಿಕಾರಿ ಜೆ.ಡಿ. ಲುಷಿಂಗ್ಟನ್ ಅವರ ಹೆಸರನ್ನು ಇದಕ್ಕೆ ಇಡಲಾಗಿದೆ. ಈ ಜಲಪಾತವು ನೀರು ಬೀಳುವಾಗ ಮಾಡುವ ಶಬ್ದದಿಂದ, ಸ್ಥಳೀಯರು ಇದನ್ನು ಕೆಪ್ಪ ಜೋಗ ಎಂದೂ ಕೂಡ ಕರೆಯುತ್ತಾರೆ. ಉಂಚಳ್ಳಿ ಜಲಪಾತ- ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ವಾಯವ್ಯಕ್ಕೆ ಸು.19ಕಿಮೀ ದೂರದಲ್ಲಿ ಉಂಚಳ್ಳಿ ಗ್ರಾಮದ ಬಳಿ ಇರುವ ಒಂದು ಸುಂದರ ಜಲಪಾತ. ಅಘನಾಶಿನಿ ನದಿ ಇಲ್ಲಿ ಅಡಿ ಕೆಳಗೆ ದುಮುಕುತ್ತದೆ. ಕರಿಬಂಡೆಗಳ ಮೇಲೆ ಹಾಲುನೊರೆ ಯಂತೆ ಇಳಿದು ಬರುವ ನೀರಿನ ಧಾರೆಯ ಸೊಬಗು ಚೇತೋಹಾರಿಯಾದುದು. ಜಲಪಾತದ ಸುತ್ತಲಿನ ಕಂದರ, ಅಡಕೆ ತೋಟಗಳು, ಸಮೃದ್ಧ ಅಡವಿಗಳು, ಇಕ್ಕೆಲಗಳಲ್ಲಿಯೂ ಎದ್ದಿರುವ ಕರಿಕಲ್ಲಿನ ಅಖಂಡ ಗೋಡೆಗಳು, ಈ ಜಲಪಾತಕ್ಕೆ ವಿಶೇಷ ಶೋಭೆಯನ್ನು ಕೊಟ್ಟಿವೆ. ಧೈರ್ಯಶಾಲಿಗಳು ಮಾತ್ರ ಜಲಪಾತದ ಕೆಳಗೆ ಇಳಿಯಬಹುದು. ಜಲಪಾತದ ಶಬ್ದ ಸು.13ಕಿಮೀ ದೂರದಲ್ಲಿರುವ ಬಿಳಗಿಯವರೆಗೂ ಕೇಳುವುದಂತೆ. ಕಿವಿಗಡಚಿಕ್ಕುವ ಅಗಾಧ ಶಬ್ದದಿಂದಾಗಿ ಇದಕ್ಕೆ ಕೆಪ್ಪಜೋಗ ಎಂಬ ಹೆಸರೂ ಸ್ಥಳೀಯರಲ್ಲಿ ಪ್ರಚಲಿತವಾಗಿದೆ. ಈ ಜಿಲ್ಲೆಯ ಕಲೆಕ್ಟರ್ ಆಗಿದ್ದ ಟಿ.ಡಿ. ಲುಸಿಂಗ್ಟನ್ ಅವರು 1843ರಲ್ಲಿ ಈ ಜಲಪಾತವನ್ನು ಕಂಡು ಹೊರ ಜಗತ್ತಿಗೆ ಪರಿಚಯ ಮಾಡಿಕೊಟ್ಟಿದ್ದರಿಂದ ಇದಕ್ಕೆ ಲುಸಿಂಗ್ಟನ್ ಫಾಲ್ಸ್‌ ಎಂದೂ ಹೆಸರು ಬಂದಿದೆ. ಈ ಜಲಪಾತದಿಂದ ಸುಮಾರು ಒಂದು ಕಿಮೀ ಮುಂದೆ ಬುರುಡೆಜೋಗ ಇದೆ. ಅಲ್ಲಿ ಇದೇ ನದಿ ಸುಮಾರು 300 ಅಡಿ ಕೆಳಗುರುಳಿ ಅನಂತರ ಎರಡು ಟಿಸಿಲುಗಳಾಗಿ 150 ಅಡಿ ಹಾರಿ ಸ್ವಲ್ಪ ದೂರ ಹರಿದು ಇನ್ನೊಂದು ಜಲಪಾತವನ್ನುಂಟು ಮಾಡಿದೆ. ಉಂಚಳ್ಳಿ ಜಲಪಾತಕ್ಕೆ ಸಿದ್ಧಾಪುರದಿಂದ ರಸ್ತೆ ಇದೆ. ಬಸ್ ಸೌಕರ್ಯವೂ ಉಂಟು.

Share. Facebook Twitter Pinterest LinkedIn Tumblr Email WhatsApp
Previous Article*ಜ.5 ರಂದು ಮರಪಾಲ ಗ್ರಾಮದಲ್ಲಿ ಸಂತ ಅಂತೋಣಿ ವಾರ್ಷಿಕೋತ್ಸವ ಸಂಭ್ರಮ*
Next Article *ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್‌ಷಿಪ್‌ ಯೋಜನೆ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*

Related Posts

ಎಸ್‌ಬಿಎಸ್ ಫಾರ್ಮ್‌ಹೌಸ್ ಮಂಗಳೂರು – ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗಾಗಿ ಒಂದು ನೆಮ್ಮದಿಯ ತಾಣ

April 18, 2025

*ಉತ್ತರ ಕರ್ನಾಟಕ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ್ ರಾಕ್ ಗಾರ್ಡನ್*

November 28, 2024

*ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*

November 27, 2024

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.