ನಾಪೋಕ್ಲು ಜ.4 NEWS DESK : ನಾಪೋಕ್ಲು ಗ್ರಾ.ಪಂ ಉಪಾಧ್ಯಕ್ಷರಾಗಿ ಕಂಗಂಡ ಶಶಿ ಮಂದಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜೀನಾಮೆಯಿಂದ ತೆರವಾಗಿದ್ದ ಗ್ರಾ.ಪಂ ಉಪಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕಂಗಂಡ ಶಶಿ ಮಂದಣ್ಣ ಅವಿರೋಧವಾಗಿ ಆಯ್ಕೆಯಾದರು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಮಡಿಕೇರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎಂ.ಪ್ರವೀಣ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೆಟ್ಟಿರ ಕುಸು ಕುಶಾಲಪ್ಪ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ